ಪ್ರತ್ಯೇಕ ರಾಜ್ಯ ವಿವಾದ: ʻಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದುʼ

ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸಚಿವ ಉಮೇಶ್‌ ಕತ್ತಿ ಹೇಳಿಕೆಯನ್ನು ನೀಡಿ, ವಿವಾದವನ್ನು ಮತ್ತೆ ಕೆದಕಿದ್ದು, ವಿವಾದಕ್ಕೆ ತುಪ್ಪ ಸುರಿಸಿದಂತೆ ಪ್ರತ್ಯೇಕ ರಾಜ್ಯದ ವಿಷಯಕ್ಕೆ ಸಂಬಂಧಿಸಿ, ಕೃಷಿ ಸಚಿವ ಬಿ.ಸಿ ಪಾಟೀಲ್ ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ‘ಕಾಲೈ ತಸ್ಮೈ ನಮಃ’ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ.

ಜಿಲ್ಲೆಯ ಹಾಸನ ತಾಲೂಕಿನ ಕಾರೆಕೆರೆಯಲ್ಲಿ ಕೃಷಿ ವಿಶ್ವವಿದ್ಯಾಲಯದ ವಸತಿ ನಿಲಯಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಸಚಿವ ಬಿ.ಸಿ. ಪಾಟೀಲ್‌, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಹೇಳಿಕೆರುವ ಉಮೇಶ್ ಕತ್ತಿ ಅವರ ಅಭಿಪ್ರಾಯ ಆಗಿದೆ. ಅವರ ಅಭಿಪ್ರಾಯಕ್ಕೆ ಎಲ್ಲರೂ ಮನ್ನಣೆ ಕೊಡಬೇಕು ಅಂತೇನೂ ಇಲ್ಲ. ಆದರೆ ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು. ಆ ರೀತಿ ಆಗುವುದಿಲ್ಲ ಎಂದು ಪ್ರತಿಪಾದನೆ ಮಾಡುತ್ತಿಲ್ಲ ಹಾಗೂ ಯಾವುದು ಆಗಲ್ಲ ಅಂತ ಹೇಳಿದ್ದಾರೆ. ಅಲ್ಲದೆ, ಈ ವಿಚಾರವಾಗಿ ಚರ್ಚಿಸಲು ಇದು ಸೂಕ್ತ ಸಮಯವಲ್ಲ ಎಂದಷ್ಟೇ ಹೇಳಿದರು.

ರಾಜ್ಯದಲ್ಲಿ ರೈತರಿಗೆ ಸರಿಯಾದ ಸಮಯದಲ್ಲಿ ಗೊಬ್ಬರ ಹಾಗೂ ಬಿತ್ತನೆ ಪೂರೈಕೆಗೆ ಕ್ರಮವಹಿಸಲಾಗಿದೆ. ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ. ಈಗಾಗಲೇ ಬಿತ್ತನೆ ಕಾರ್ಯ ಮುಗಿದಿರುವ ಪ್ರದೇಶಗಳಲ್ಲಿ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ನಾಯಕರಲ್ಲೆ ಕಚ್ಚಾಟ:

ಕಾಂಗ್ರೆಸ್‍ ಪಕ್ಷದಲ್ಲಿ ಏನು ನಡೆಯುತ್ತಿದೆ ಎಂದು ಜನ ನೋಡುತ್ತಿದ್ದಾರೆ. ಒಂದು ಕಡೆ ಸಿದ್ದರಾಮಯ್ಯೋತ್ಸವ ಅಂತ ಹೇಳುತ್ತಾರೆ ಮತ್ತೊಂದು ಕಡೆ ಡಿ.ಕೆ ಶಿವಕುಮಾರ್ ಸಾಮೂಹಿಕ ನಾಯಕತ್ವ ಅಂತ ಹೇಳುತ್ತಿದ್ದು, ಅವರಲ್ಲಿಯೇ ಹೊಂದಾಣಿಕೆ ಇಲ್ಲ. ಅವರ ಕಚ್ಚಾಟ ಅವರ ವೈಯಕ್ತಿಕ ವಿಚಾರ ನಮಗೂ ಸಂಬಂಧವಿಲ್ಲ. ಆದರೆ, ಇಂದು ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲಿಯೂ ನಿರ್ನಾಮವಾಗಿದ್ದು ಇತ್ತೀಚೆಗೆ ಮಹಾರಾಷ್ಟ್ರದಲ್ಲೂ ತನ್ನ ಮೈತ್ರಿ ಸರ್ಕಾರವನ್ನು ಕಳೆದುಕೊಂಡಿದೆ ಹಾಗೂ ಪಂಜಾಬ್ ನಲ್ಲಿಯೂ ಸಹ ಹೀನಾಯ ಸೋಲು ಕಂಡಿರುವುದು ಕಾಂಗ್ರೆಸ್‍ನ ವಾಸ್ತವ ಸ್ಥಿತಿ. ರಾಜ್ಯ ಕಾಂಗ್ರೆಸ್ ನಾಯಕರು ಭ್ರಮಾಲೋಕದಲ್ಲಿದ್ದಾರೆ ಎಂದರು.

ಮುಂದಿನ ಬಾರಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಬಿ.ಸಿ. ಪಾಟೀಲ್‌, ಎಷ್ಟು ಸೀಟು ತೆಗೆದುಕೊಂಡು ಮುಖ್ಯಮಂತ್ರಿ ಆಗುತ್ತಾರೆ ಎಂದು ಕುಮಾರಸ್ವಾಮಿ ಅವರನ್ನೇ ಕೇಳಿ. 122 ಅಥವಾ ಮ್ಯಾಜಿಕ್ ನಂಬರ್ 113 ಬರುತ್ತದೆ ಗೊತ್ತಿಲ್ಲ ಆದರೆ 113 ಮ್ಯಾಜಿಕ್ ನಂಬರ್ ಬಂದರೆ. ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದರು.

Donate Janashakthi Media

Leave a Reply

Your email address will not be published. Required fields are marked *