ಬೆಂಗಳೂರು: ನಾಳೆಯಿಂದ ರಾಜ್ಯ ವಿಧಾನಮಂಡಲದ ಅಧಿವೇಶನ ಶುರುವಾಗಲಿದೆ. ಅಧಿವೇಶನದೊಳಗೆ ಸಂಪುಟ ವಿಸ್ತರಣೆ ಬಗ್ಗೆ ಖಚಿತ ಮಾಹಿತಿ ಹೊರಬೀಳಬಹುದು, ತಾವು ಮಂತ್ರಿಯಾಗಬಹುದು ಎಂದು ಕಾಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ಸಂಪುಟ ವಿಸ್ತರಣೆ ಬಗ್ಗೆ ಇವತ್ತು ಚರ್ಚೆಯಾಗಿಲ್ಲ. ನಾಳೆಯೂ ಕೂಡ ಆ ರೀತಿಯ ಬೆಳವಣಿಗೆ ಇಲ್ಲ. ಸಂಪುಟ ವಿಸ್ತರಣೆಗೆ ಇನ್ನೂ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ. ಎಲ್ಲವನ್ನೂ ಕೇಂದ್ರದ ಬಿಜೆಪಿ ನಾಯಕರು ನಿರ್ಧರಿಸಲಿದ್ದಾರೆ. ಸಿಎಂ ಯಡಿಯೂರಪ್ಪ ಈಗಾಗಲೇ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ಗೆ ನೀಡಿದ್ದಾರೆ. ಆದರೆ, ಅಲ್ಲಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎನ್ನುವ ಮೂಲಕ ಸಚಿವಾಕಾಂಕ್ಷಿಗಳ ಆಸೆಗೆ ತಣ್ಣೀರು ಎರಚಿದ್ದಾರೆ.
ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಆರ್. ಅಶೋಕ್, ಸಂಪುಟ ವಿಸ್ತರಣೆ ಬಗ್ಗೆ ಇವತ್ತು ಚರ್ಚೆಯಾಗಿಲ್ಲ. ನಾಳೆಯೂ ಕೂಡ ಆ ರೀತಿಯ ಬೆಳವಣಿಗೆ ಇಲ್ಲ ಎಂದಿದ್ದಾರೆ. ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ, ಇಂದು ಆ ಬಗ್ಗೆ ಯಾವುದೇ ಚರ್ಚೆಯೂ ನಡೆದಿಲ್ಲ. ಅರುಣ್ ಸಿಂಗ್ ಅವರ ಜೊತೆಗೆ ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆ ಮತ್ತು ಸರ್ಕಾರದ ಬಗ್ಗೆ ಮಾತ್ರ ಚರ್ಚೆ ನಡೆಸಲಾಗುವುದು. ಸಂಪುಟ ವಿಸ್ತರಣೆ ಬಗ್ಗೆ ಯಾವ ಚರ್ಚೆಗೂ ನಡೆದಿಲ್ಲ ಎನ್ನುವ ಮೂಲಕ ಆರ್. ಅಶೋಕ್ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.
ಇದರಿಂದ ನಾಳೆ ಬೆಳಿಗ್ಗೆಯಾದರೂ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಕನಸು ಕಂಡಿದ್ದ ಆಕಾಂಕ್ಷಿಗಳಿಗೆ ಭಾರೀ ನಿರಾಸೆಯಾಗಿದೆ. ನಾಳೆಯೂ ಸಂಪುಟ ವಿಸ್ತರಣೆ ಆಗೋದಿಲ್ಲ ಎಂದು ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಇಂದು ಅರುಣ್ ಸಿಂಗ್ ಅವರನ್ನು ಭೇಟಿಯಾದರೂ ಪಕ್ಷದ ಬೆಳವಣಿಗೆ ಬಗ್ಗೆ ಮಾತ್ರ ಚರ್ಚೆಯಾಗುತ್ತದೆ. ಆದರೆ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ನಿರ್ಧಾರ ಆಗಲ್ಲ. ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಎಲ್ಲವನ್ನೂ ಕೇಂದ್ರದ ತೀರ್ಮಾನಕ್ಕೆ ಬಿಟ್ಟಿದ್ದೇವೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ಮುಖ್ಯಮಂತ್ರಿಗಳು ತೀರ್ಮಾನ ಕೈಗೊಂಡರೂ ಅದಕ್ಕೆ ಕೇಂದ್ರದ ಒಪ್ಪಿಗೆ ಬೇಕಾಗುತ್ತದೆ. ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ. ಇವತ್ತು ಅರುಣ್ ಸಿಂಗ್ ಜೊತೆ ಪಕ್ಷದ ಬೆಳವಣಿಗೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎನ್ನುವ ಮೂಲಕ ಆರ್ ಅಶೋಕ್ ಇಂದು ಮಂತ್ರಿಯಾಗುವ ಕನಸು ಕಂಡಿದ್ದ ಸಚಿವಕಾಂಕ್ಷಿಗಳಿಗೆ ಭಾರೀ ನಿರಾಸೆ ಮೂಡಿಸಿದ್ದಾರೆ.
ನಾಳೆಯಿಂದ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಆರ್ ಅಶೋಕ್, ರಾಜ್ಯದಲ್ಲಿ ಪ್ರತಿಪಕ್ಷ ಇದ್ದರೆ ತಾನೇ ಅದನ್ನು ಎದುರಿಸಲು ನಾವು ಸಜ್ಜಾಗೋದು? ಈಗಾಗಲೇ ಕಾಂಗ್ರೆಸ್ನ ನಂಬಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಕೂಡ ಜಗಳವಾಡಿದ್ದಾರೆ. ಕಾಂಗ್ರೆಸ್ ಈಗ ಒಂಟಿಯಾಗಿದೆ. ಹೀಗಾಗಿ, ಕಾಂಗ್ರೆಸ್ ಪಕ್ಷವನ್ನು ಎದುರಿಸಲು ನಾವು ಸಜ್ಜಾಗುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ವಿಧಾನಸೌಧದಲ್ಲೇ ಅಧಿವೇಶನಕ್ಕೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ. ಈಗ ಬೆಳಗಾವಿಗೆ ಹೋದರೆ ಸರ್ಕಾರದ ಮೇಲೆ ಮತ್ತಷ್ಟು ಹೊರೆಯಾಗಲಿದೆ. ಹೀಗಾಗಿ, ವಿಧಾನಸೌಧದಲ್ಲಿಯೇ ಅಧಿವೇಶನ ನಡೆಸಲಿದ್ದೇವೆ. ಸುವರ್ಣಸೌಧದಲ್ಲಿ ಮುಂದಿನ ದಿನಗಳಲ್ಲಿ ಅಧಿವೇಶನ ನಡೆಸುತ್ತೇವೆ ಎಂದು ಸಚಿವ ಆರ್ ಅಶೋಕ ತಿಳಿಸಿದ್ದಾರೆ.
ಬೆಂಗಳೂರಿಗೆ ವಿಶೇಷವಾದ ಕಾಯ್ದೆ ತರುತ್ತಿದ್ದೇವೆ. ಅದನ್ನು ನಾಳೆಯ ಅಧಿವೇಶನದಲ್ಲಿ ಪಾಸ್ ಮಾಡುತ್ತೇವೆ. ವಿಧಾನಸಭೆಯಲ್ಲಿ ಕಾಯ್ದೆ ಅಂಗೀಕಾರವಾದರೆ ಅದರ ಸ್ಟೇಟಸ್ಸೇ ಬೇರೆ ಆಗುತ್ತದೆ. ಕಾಯ್ದೆ ಪ್ರಕಾರವೇ ಚುನಾವಣೆ ನಡೆಸೋ ಬಗ್ಗೆ ಕಾನೂನು ತಜ್ಞರ ಸಲಹೆ ತೆಗೆದುಕೊಂಡಿದ್ದೇವೆ. ಅದರ ಪ್ರಕಾರವೇ ನಾವು ಮುಂದುವರೆಯುತ್ತೇವೆ. ಹೆಚ್ಚು ವಾರ್ಡ್ ಗಳ ಮೂಲಕವೇ ಚುನಾವಣೆಗೆ ಹೋಗಬೇಕು ಎಂಬ ಉದ್ದೇಶ ನಮ್ಮದು. ಆ ದೃಷ್ಟಿಯಲ್ಲಿ 243 ವಾರ್ಡ್ ಗಳನ್ನು ಮಾಡಿದ್ದೇವೆ. ಅದರಂತೆ ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದುವರೆಯುತ್ತೇವೆ ಎಂದು ಆರ್ ಅಶೋಕ್ ಹೇಳಿದ್ದಾರೆ.