ನವದೆಹಲಿ: ಸನಾತನ ಧರ್ಮದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸನಾತನ ಧರ್ಮದ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆ ಮಾಜಿ ಸಂಸದ ಎ ರಾಜಾ ನೀಡಿದ್ದ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಇದನ್ನೂ ಓದಿ:ಹರಿದು ಹೋಗಿದೆ ಕೌದಿ ಹೊಲಿಯುವವರ ಬದುಕು
ಈ ಹಿಂದೆ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು, ‘‘ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ನಾವು ಕೊರೊನಾ, ಡೆಂಗೆ, ಮಲೇರಿಯಾದಂಥ ಸೋಂಕುಗಳನ್ನು ವಿರೋಧಿಸಬಾರದು. ಆರೋಗ್ಯ ಜಾಗೃತಿಯ ಮೂಲಕ ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ಸಾಮಾಜಿಕ ಜಾಗೃತಿಯ ಮೂಲಕ ನಿರ್ಮೂಲನೆ ಮಾಡಬೇಕು,’’ ಎಂದು ಕರೆ ನೀಡಿದ್ದರು.
Supreme Court issues notice to the Tamil Nadu government and DMK leader Udhayanidhi Stalin for his remarks on 'Sanatan Dharma'
(file pic) pic.twitter.com/8HeBATdwwx
— ANI (@ANI) September 22, 2023
ವಿಡಿಯೋ ನೋಡಿ: ಕ್ರೀಡಾ ಬದ್ಧತೆ ಮೆರೆದ ಮೊಹಮ್ಮದ್ ಸಿರಾಜ್ Janashakthi Media