ಸಂಡೂರು : ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ವೆಂಕಟೇಶ್ವರ ದೇವಸ್ಥಾನದ ಪಕ್ಕದಲ್ಲಿನ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದ ದಲಿತ ಸಮುದಾಯವನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡಡದಿದೆ. ಇದನ್ನು ಖಂಡಿಸಿ ರೈತ ಮತ್ತು ಯುವಜನ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ.
ಇಂದು ಬೆಳ್ಳಂಬೆಳಿಗ್ಗೆ ಅರಣ್ಯಾಧಿಕಾರಿಗಳು ಮತ್ತು ಪೋಲಿಸ್ ಅಧಿಕಾರಿಗಳ ತಂಡ ಸಾಗುವಳಿ ಜಾಗಕ್ಕೆ ಭೇಟಿ ನೀಡಿ ಉಳಿಮೆ ಮಾಡದಂತೆ ತಾಕೀತು ಮಾಡಿದ್ದರೆ. ಒಂದು ಹಂತಕ್ಕೆ ರೈತರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ರೈತರ ಪ್ರತಿರೋಧ ತೋರಿದ್ದರಿಂದ ಅರಣ್ಯಾಧಿಕಾರಿಗಳು ಸುಮ್ಮನಾಗಿದ್ದಾರೆ. ಆದರೆ ಹೆಚ್ಚುವರಿ ಪೊಲೀಸರನ್ನು ಕರೆ ತರುವ ವ್ಯವಸ್ಥೆ ಮಾಡಲಾಗುತ್ತಿದೆ ಇದಕ್ಕೆ ನಾವು ಹೆದರುವುದಿಲ್ಲ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ್ ತಿಳಿಸಿದ್ದಾರೆ.
ಸುಮಾರು ಮೂರ್ನಾಲ್ಕು ತಲೆಮಾರುಗಳಿಂದ ಭೂಮಿಯಲ್ಲಿ ಸಾಗುವಳಿ ಮಾಡುತ್ತ ಬಂದಿದ್ದಾರೆ ಹಾಗೂ ಪೂರ್ವಜರ ಸಮಾಧಿಗಳು ಕೂಡ ಆ ಭೂಮಿಯಲ್ಲಿ ಇವೆ, ಎಸ್.ಸಿ, ಎಸ್.ಟಿ, ಅಲ್ಪಸಂಖ್ಯಾತರು ಈ ಭೂಮಿಯಲ್ಲಿ ಸಾಗುವಳಿ ಮಾಡುವುದಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಬಿಡುತ್ತಿಲ್ಲ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ತೋರಣಗಲ್ಲು ಸಿಪಿಐಎಂ ಕಾರ್ಯದರ್ಶಿ ಸ್ವಾಮಿ ತಿಳಿಸಿದ್ದಾರೆ.
ಸ್ಥಳದಲ್ಲಿ ಡಿವೈಎಫ್ ನಾಯಕ ಕಾಲೂಬ್ ಅಜಾದ್, ಚನ್ನಬಸಪ್ಪ ಹಾಗೂ ಸಾಗುವಳಿ ಮಾಡುತ್ತಿದ್ದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.