ಮಂಡ್ಯ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೀಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ರಾಯಣ್ಣ ಪ್ರತಿಮೆಯ ಕೈಯಲ್ಲಿದ್ದ ಕತ್ತಿ ಮುರಿದು, ಕಾಲು ಸೇರಿದಂತೆ ವಿವಿಧ ಭಾಗಗಳನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಕಳೆದ ವರ್ಷ ಗ್ರಾಮಸ್ಥರು ಈ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು.
ಇದನ್ನೂ ಓದಿ: ಕ್ಯಾಂಟರ್ ಪಲ್ಟಿ: ಕಾರ್ಮಿಕರು ಮೃತ
ಈ ಸುದ್ದಿ ತಿಳಿಯುತ್ತಿದ್ದಂತೆ ಪ್ರತಿಮೆ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ನೋಡಿ: ಮೋದಿಯ ಹತ್ತು ವರ್ಷ ಆಡಳಿತದಲ್ಲಿ 40ಲಕ್ಷ ಮಹಿಳೆಯರು ಉದ್ಯೋಗ ಕಳೆದುಕೊಂಡಿದ್ದರೆJanashakthi Media