ನವದೆಹಲಿ, ಡಿಸೆಂಬರ್ 9: ಭಾರತೀಯ ರಿಸರ್ವ್ ಬ್ಯಾಂಕ್ಗೆ ನೂತನ ಗವರ್ನರ್ ನೇಮಕವಾಗಿದೆ. ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು ಆರ್ಬಿಐನ ಗವರ್ನರ್ ಆಗಿ ಸರ್ಕಾರ ನೇಮಕ ಮಾಡಿದೆ.
ಪ್ರಸಕ್ತ ಆರ್‌ಬಿಐ ಗವರ್ನರ್ ಆಗಿರುವ ಶಕ್ತಿಕಾಂತ ದಾಸ್ ಅವರ ಸೇವಾವಧಿ ಡಿಸೆಂಬರ್ 10, ನಾಳೆ ಮಂಗಳವಾರ ಅಂತ್ಯವಾಗುತ್ತಿದೆ. ಡಿಸೆಂಬರ್ 11ಕ್ಕೆ ಸಂಜಯ್ ಮಲ್ಹೋತ್ರಾ ಆರ್‌ಬಿಐ ಗವರ್ನರ್ ಆಗಿ ಪದಗ್ರಹಣ ಮಾಡಲಿದ್ದಾರೆ. ಮೂರು ವರ್ಷ ಕಾಲ ಅವರ ಸೇವಾವಧಿ ಇರಲಿದೆ. ಮಲ್ಹೋತ್ರಾ ಅವರು 26ನೇ ಆರ್‌ಬಿಐ ಗವರ್ನರ್ ಆಗಲಿದ್ದಾರೆ.
ಮಲ್ಹೋತ್ರಾ, 1990 ರ ಬ್ಯಾಚ್ ರಾಜಸ್ಥಾನ ಕೇಡರ್ IAS ಅಧಿಕಾರಿಯಾಗಿದ್ದು, ಅವರು ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್‌ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅಲ್ಲದೆ ತೆರಿಗೆ ಸಂಗ್ರಹ ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಾಣುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಬಜೆಟ್ ವಿಚಾರದಲ್ಲಿ ತೆರಿಗೆ ಸಂಬಂಧಿತ ಪ್ರಸ್ತಾವನೆಗಳನ್ನು ಅವರು ಪರಿಶೀಲಿಸುತ್ತಿದ್ದರು. ಜಿಎಸ್‌ಟಿ ಕೌನ್ಸಿಲ್‌ನ ಪದನಿಮಿತ್ತ ಕಾರ್ಯದರ್ಶಿಯಾಗಿ ಹಾಗೂ ಸರಕು ಮತ್ತು ಸೇವಾ ತೆರಿಗೆಯಲ್ಲಿ ರಾಜ್ಯಗಳ ನಿರೀಕ್ಷೆಗಳ ವಿಚಾರಗಳಂಥ ಕ್ಲಿಷ್ಟ ಸಂದರ್ಭಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು.