ಪತ್ರಕರ್ತೆ ಸನಾಗೆ ವಿದೇಶ ಪ್ರಯಾಣಕ್ಕೆ ಅನುಮತಿ ನಿರಾಕರಣೆ

ನವದೆಹಲಿ: ಪುಲಿಟ್ಜರ್ ಪ್ರಶಸ್ತಿ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅಮೆರಿಕಕ್ಕೆ ತೆರಳದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದಾರೆ.

ಮಾನ್ಯತೆಗೊಂಡ ವೀಸಾ ಮತ್ತು ಟಿಕೆಟ್ ಹೊಂದಿದ್ದರೂ ಅಮೆರಿಕಕ್ಕೆ ತೆರಳದಂತೆ ಅಧಿಕಾರಿಗಳು ತಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ಕುರಿತು ರಾಯಿಟರ್ಸ್ ನಲ್ಲಿನ 28 ವರ್ಷದ ಫೋಟೋ ಜರ್ನಲಿಸ್ಟ್ ಸೋಮವಾರ ಪುಲಿಟ್ಜರ್ ಪ್ರಶಸ್ತಿ ಪಡೆಯಲು ನ್ಯೂಯಾರ್ಕ್ ಗೆ ತೆರಳಲು ನಿರ್ಧರಿಸಿದ್ದರು. ‘ನ್ಯೂಯಾರ್ಕ್ನಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಸ್ವೀಕರಿಸಲು ಹೊರಟಿದ್ದೆ ಆದರೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದರು. ಮಾನ್ಯವಾದ ಯುಎಸ್ ವೀಸಾ ಮತ್ತು ಟಿಕೆಟ್ ಹೊಂದಿದ್ದರೂ ಅಂತಾರಾಷ್ಟ್ರೀಯ ಪ್ರಯಾಣವನ್ನು ನಿರ್ಬಂಧಿಸಲಾಯಿತು ಎಂದು ಮಟ್ಟೂ ಮಂಗಳವಾರ ಟ್ವೀಟ್ ಮಾಡಿದ್ದಾರೆ.

ಕಳೆದ ನಾಲ್ಕು ತಿಂಗಳಲ್ಲಿ ಎರಡನೇ ಬಾರಿಗೆ ವಿದೇಶ ಪ್ರವಾಸವನ್ನು ನಿರ್ಬಂಧಿಸಲಾಗಿದೆ. ಕಾರಣವಿಲ್ಲದೆ ನನ್ನನ್ನು ವಿದೇಶಕ್ಕೆ ತೆರಳದಂತೆ ತಡೆಯಲಾಗಿದೆ.ಇದರಿಂದಾಗಿ ಜೀವನದಲ್ಲಿ ನನ್ನಗೆ ಒಮ್ಮೆ ಸಿಕ್ಕಿದ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಪತ್ರಕರ್ತೆಯ ವಿದೇಶಿ ಪ್ರಯಾಣಕ್ಕೆ ಅನುಮತಿ‌ ನಿರಾಕರಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ, ಸನ್ನಾ ಪ್ರಯಾಣಕ್ಕೆ ಅನುಮತಿ ನೀಡುವಂತೆ ಪೋಸ್ಟ್ ಗಳನ್ನು ಮಾಡಲಾಗುತ್ತಿದೆ.

Donate Janashakthi Media

Leave a Reply

Your email address will not be published. Required fields are marked *