ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದ ಸಚಿವ ಕೆ.ಎಸ್‌. ಈಶ್ವರಪ್ಪ ಇಂದು ಸುದ್ದಿಗೋಷ್ಟಿಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆ.ಎಸ್.ಈಶ್ವರಪ್ಪ ದಿಢೀರ್ ಸುದ್ದಿಗೋಷ್ಠಿ ಕರೆದು ರಾಜೀನಾಮೆ ಬಗ್ಗೆ ಪ್ರಸ್ತಾಪಸಿದರು.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.‌ ಈಶ್ವರಪ್ಪ,  ನಾಳೆ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾಳೆ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತೇನೆ. ಈ ಕುರಿತು ನಾನು ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಮುಖ್ಯಮಂತ್ರಿ ಹಾಗೂ ಎಲ್ಲ ಸ್ನೇಹಿತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಪಕ್ಷಕ್ಕೆ ಮುಜುಗರವಾಗಬಾರದೆಂದು ರಾಜೀನಾಮೆ ನಿರ್ಧಾರ ಮಾಡಿದ್ದೇನೆ  ಎಂದು ಹೇಳಿದರು.

ಇದನ್ನು ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣ : ಕೆಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲು, ಎಫ್‌ಐಆರ್‌ನಲ್ಲಿ ಏನಿದೆ?

ರಾಜೀನಾಮೆ ನೀಡುವ ಬಗ್ಗೆ 3-4 ದಿನದ ಹಿಂದೆ ನಿರ್ಧರಿಸಿದ್ದೆ. ನಾಯಕರು ನನಗೆ ಅವಸರ ಮಾಡುವುದು ಬೇಡ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಾನು ಪಕ್ಷಕ್ಕೆ ಮುಜುಗರ ಆಗಬಾರದು ಎನ್ನುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿರುವೆ. ಯಾವುದೇ ಕಾರಣಕ್ಕೂ ನಾನು ಈ ಪ್ರಕರಣದಲ್ಲಿ ಬಲಿಪಶು ಅಲ್ಲ ಎಂದರು.

ಇದನ್ನು ಓದಿ: ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ-ಬಂಧಿಸಿ, ಕಮಿಷನ್ ವ್ಯವಹಾರ ನ್ಯಾಯಾಂಗ ತನಿಖೆಗೊಳಪಡಿಸಿ: ಸಿಪಿಐ(ಎಂ) ಆಗ್ರಹ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಆಗ್ರಹಿಸಿವೆ. ಕಾಂಗ್ರೆಸ್‌ ಪಕ್ಷದ ವತಿಯಿಂದ ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ಹಾಕುವ ಹಿನ್ನೆಲೆಯಲ್ಲಿಂದು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಇಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಇದನ್ನು ಓದಿ: ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ‌ ಸಿಎಂ ನಿವಾಸಕ್ಕೆ ಮುತ್ತಿಗೆ; ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಪೊಲೀಸರು

40% ಕಮಿಷನ್‌ ಆರೋಪಕ್ಕೆ ಸಂಬಂಧಿಸಿದಂತೆ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಭಾರೀ ಚರ್ಚೆಗೆ ಒಳಗಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಕಳೆದ ಮಂಗಳವಾರ (ಏಪ್ರಿಲ್‌ 12) ಉಡುಪಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಶಾಂಭವಿ ಹೋಟೆಲ್ ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.

Donate Janashakthi Media

Leave a Reply

Your email address will not be published. Required fields are marked *