ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ| ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ ಎಂದು ಡಿಸೆಂಬರ್-04‌ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತೆಗೆಯುವ

ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಇದು ಸ್ಪೀಕರ್‌ಗೆ (ನಿರ್ಧರಿಸಲು) ಬಿಡಲಾಗಿದೆ’ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾವಚಿತ್ರವನ್ನು ಅಳವಡಿಸಲಾಗಿತ್ತು. 2022ರ ಡಿಸೆಂಬರ್‌ನಲ್ಲಿ ಸಾವರ್ಕರ್ ಅವರ ಭಾವಚಿತ್ರದ ಅನಾವರಣವು ಆಗಿನ ವಿರೋಧ ಪಕ್ಷವಾದ ಕಾಂಗ್ರೆಸ್‌ನಿಂದ ಟೀಕೆಗೆ ಗುರಿಯಾಗಿತ್ತು. ಇದು ಏಕಪಕ್ಷೀಯ ನಿರ್ಧಾರ ಎಂದು ಆರೋಪಿಸಿತ್ತು ಎಂದರು.

ಇದನ್ನೂ ಓದಿ:ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಧಾನಸಭೆಯ ಸಭಾಂಗಣದಲ್ಲಿ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಭಾವಚಿತ್ರ ಅಳವಡಿಸುವ ಪ್ರಸ್ತಾವನೆಯನ್ನು ಚರ್ಚಿಸಲಾಗುವುದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.

ಕಳೆದ ವರ್ಷ ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಬಿ.ಆರ್ ಅಂಬೇಡ್ಕರ್, ಬಸವೇಶ್ವರ, ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಮತ್ತು ಸಾವರ್ಕರ್ ಅವರ ಭಾವಚಿತ್ರಗಳನ್ನು ಅಂದಿನ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಳಿಸಿದ್ದರು.

ಆಗ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಕುವೆಂಪು, ನಾರಾಯಣ ಗುರು, ಶಿಶುನಾಳ ಷರೀಫ್, ನೆಹರು ಮತ್ತು ಬಾಬು ಜಗಜೀವನ್ ರಾಮ್ ಅವರಂತಹ ರಾಷ್ಟ್ರ ಮತ್ತು ರಾಜ್ಯದ ಹಲವಾರು ಪ್ರಮುಖರ ಚಿತ್ರಗಳನ್ನು ಹಿಡಿದು ‘ಸುವರ್ಣ ವಿಧಾನ ಸೌಧ’ದ ಹೊರಗೆ ಪ್ರತಿಭಟನೆ ನಡೆಸಿದ್ದರು. ಸ್ಪೀಕರ್ 

ವಿಡಿಯೋ ನೋಡಿ:ಚಳಿಗಾಲದ ಅಧಿವೇಶನ ಬೆಳಗಾವಿ 2023| ಡಿಸೆಂಬರ್‌ 04 | ಭಾಗ 01 Live #wintersession2023

 

Donate Janashakthi Media

Leave a Reply

Your email address will not be published. Required fields are marked *