ಸರಕಾರ ವಿಫಲವಾಗಿದೆ-ನಾಯಕತ್ವ ಬದಲಾವಣೆಯಿಂದ ಏನು ಸಾಧ್ಯ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಯುತ್ತಿರುವ ಬಿಜೆಪಿ ಸರಕಾರವು ಜನರ ಹಿತ ಕಾಪಾಡಲು ಸಂಪೂರ್ಣ ವಿಫಲವಾಗಿದೆ. ಅದರ ನಾಯಕ ಮುಖ್ಯಮಂತ್ರಿ ಯಡಿಯೂರಪ್ಪ ಸಹ ಅಸಮರ್ಥರಾಗಿದ್ದು ಅವರನ್ನು ಬದಲಾವಣೆ ಮಾಡುವುದರಿಂದ ಪಾಪ ತೊಳೆದುಕೊಳ್ಳಬಹುದೆಂದು ಬಿಜೆಪಿ ಹೈಕಮಾಂಡ್‌ ತಿಳಿದಂತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದರು.

ಇಂದು ರಾಜ್ಯದ ಬಿಜೆಪಿ ಸರಕಾರದ ವಿಫಲತೆಗಳ ಬಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಅವರು  ʻʻಬಿಜೆಪಿಗೆ ಯಡಿಯೂರಪ್ಪ ಬೇಡದ ಕೂಸಾಗಿದ್ದಾರೆ, ಕಿತ್ತುಹಾಕಲು ಹೈಕಮಾಂಡ್ ಸಿದ್ಧ ಇದೆ, ಬಿಜೆಪಿ ನಾಯಕರೂ ನಾಯಕರು ಕೂಡಾ ಕೊಡವಿಕೊಳ್ಳಲು ಸಿದ್ಧ ಇದ್ದಾರೆ. ಬಿ.ಎಸ್.‌ ಯಡಿಯೂರಪ್ಪ ನಿರ್ಗಮನದ ನಂತರ ಪಕ್ಷದ ಸ್ಥಿತಿ ಏನಾಗಬಹುದೆಂಬ ಚಿಂತೆ ಅವರಿಗೆ. ಪರ್ಯಾಯ ನಾಯಕರು ಆ ಪಕ್ಷದಲ್ಲಿ ಇಲ್ಲ ಹಾಗಾಗಿ ನಾಯಕತ್ವವೇ ದಿವಾಳಿಯಾಗಿದೆ. ಅದಕ್ಕೆ ಅವರು ಒದ್ದಾಡುತ್ತಿದ್ದಾರೆʼʼ ಎಂದು ಆರೋಪಿಸಿದರು.

ಇದನ್ನು ಓದಿ: ಮಾಜಿ ಸಚಿವ, ಶಾಸಕ ಸಿಎಂ ಉದಾಸಿ ನಿಧನ

ಕೋವಿಡ್‌ ಸಂಕಷ್ಟದಿಂದ ಲಾಕ್‌ಡೌನ್‌ ಜಾರಿಯಾಗಿದ್ದು ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬಿಜೆಪಿ ಸರಕಾರ ಈವರೆಗೆ ಸರಿಯಾಗಿ ರೂ. 1 ಸಾವಿರ ಕೋಟಿಯನ್ನು ಪರಿಹಾರವಾಗಿ ನೀಡಿಲ್ಲ, ಕೇವಲ ತೋರಿಕೆಗಾಗಿ ಕೆಲವರಿಗೆ ಪರಿಹಾರ ನೀಡಿದ್ದಾರೆ. ಎಲ್ಲಾ ಬಿ.ಪಿ.ಎಲ್ ಕಾರ್ಡುದಾರರಿಗೆ ತಲಾ ಹತ್ತು ಕೆ.ಜಿ ಅಕ್ಕಿ ಮತ್ತು ರೂ.10,000 ಪರಿಹಾರ ನೀಡಿದ್ದರೆ ನಿಜವಾದ ಪರಿಹಾರವಾಗುತ್ತಿತ್ತು ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಬಗೆಬಗೆಯ ಕಸರತ್ತು ನಡೆಸುತ್ತಿದ್ದಾರೆ. ಒಂದೆಡೆ ಹೈಕಮಾಂಡ್ ಹೇಳಿದ ಕೂಡಲೇ ರಾಜೀನಾಮೆ ಕೊಡ್ತೀನಿ ಅಂತಾರೆ, ಇನ್ನೊಂದೆಡೆ ತಮ್ಮ ರಾಜಕೀಯ ಕಾರ್ಯದರ್ಶಿ ಮೂಲಕ ಶಾಸಕರ ಸಹಿ ಸಂಗ್ರಹಿಸುತ್ತಿದ್ದಾರೆ. ಅವರಿಗೆ ರಾಜ್ಯದ ಚಿಂತೆ ಇಲ್ಲ, ಕುರ್ಚಿ ಉಳಿಸಿಕೊಳ್ಳುವುದೇ ಚಿಂತೆಯಾಗಿದೆಯಾಗಿದೆ ಎಂದು ಆರೋಪಿಸಿದರು.

ಮೈಸೂರು ಜಿಲ್ಲೆಯ ಬೆಳೆವಣಿಗೆ ಕುರಿತು ವಿವರಿಸಿದ ಸಿದ್ದರಾಮಯ್ಯ ಅವರು ʻʻಮೈಸೂರು ಜಿಲ್ಲೆಯ ಐ.ಎ.ಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆ.ಡಿ.ಎಸ್ ನ ಸಾ.ರಾ ಮಹೇಶ್ ಕಾರಣ. ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಮೊದಲು ರೋಹಿಣಿ ಸಿಂಧೂರಿ ಅವರನ್ನು ಬೆಂಬಲಿಸಿದರು, ಈಗ ಶಿಲ್ಪಾನಾಗ್ ಪರವಾಗಿ ನಿಂತಿದ್ದಾರೆ. ಒಟ್ಟಿನಲ್ಲಿ ಇಬ್ಬರನ್ನೂ ಎತ್ತಿಕಟ್ಟಿ ಜಗಳ ತಂದಿಟ್ಟಿದ್ದಾರೆ. ಅದೇ ರೀತಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಲು ಅಧಿಕಾರಿಗಳಿಗೆ ಅನುಮತಿ ನೀಡಿದವರು ಯಾರು? ಅನುಮತಿ ಇಲ್ಲದೆ ಪತ್ರಿಕಾಗೋಷ್ಠಿ ಕರೆಯಲು ಅವಕಾಶ ಇಲ್ಲ. ವರ್ಗಾವಣೆ ಮಾಡಿದರಷ್ಟೇ ಸಾಲದು ನಿಯಮ ಉಲ್ಲಂಘಿಸಿದ ಇಬ್ಬರು ಅಧಿಕಾರಿಗಳ ವಿರುದ್ಧವು ರಾಜ್ಯ ಸರಕಾರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿ: ನನ್ನ ವರ್ಗಾವಣೆ ಹಿಂದೆ ಭೂಮಾಫಿಯಾ ಪಿತೂರಿ ಇದೆ – ರೋಹಿಣಿ ಸಿಂಧೂರಿ

ರೋಹಿಣಿ ಸಿಂಧೂರಿ ಅವರು ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ ಎಂದು ಆರೋಪಿಸಿದ್ದಾರೆ. ಆ ಹಗರಣ ಯಾವುದು? ಅದರಲ್ಲಿ ಯಾರೆಲ್ಲಾ ರಾಜಕಾರಣಿಗಳ ಷಾಮೀಲಾಗಿದ್ದಾರೆ? ಈ ವಿಷಯದಲ್ಲಿ ಯಾವ ಅಧಿಕಾರಿಗಳನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು. ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಅವರನ್ನು ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರ ಸದೃಢವಾಗಿದ್ದರೆ ಅಧಿಕಾರಿಗಳು ಈ ರೀತಿ ಬೇಕಾಬಿಟ್ಟಿ ನಡೆದುಕೊಳ್ಳುತ್ತಿರಲಿಲ್ಲ. ರಾಜಕಾರಣಿಗಳು ಅಧಿಕಾರಿಗಳನ್ನು ಬೆಂಬಲಿಸುವ ಅಥವಾ ವಿರೋಧಿಸುವ ಕೆಲಸ ಮಾಡಬಾರದು. ಅದು ತಪ್ಪು. ಇದು ರಾಜಕೀಯ ನಾಯಕತ್ವದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.

ಇದನ್ನು ಓದಿ: ಲಸಿಕೆ ವಿಚಾರವಾಗಿ ಕೇಂದ್ರವು ಪದೇಪದೇ ಯೂ-ಟರ್ನ್ ಹೊಡೆಯುತ್ತಿದೆ: ಡಿ.ಕೆ. ಶಿವಕುಮಾರ್

ದೇಶದ ಪ್ರತಿ ಪ್ರಜೆಗೂ ಉಚಿತವಾಗಿ ಕೊರೊನಾ ಲಸಿಕೆಯನ್ನು ಕೇಂದ್ರ ಸರ್ಕಾರವೇ ನೀಡಬೇಕು ಎಂದು ಮೊದಲಿನಿಂದಲೂ ನಾವು ಒತ್ತಾಯ ಮಾಡುತ್ತ ಬಂದಿದ್ದೆವು. ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ ಹೆದರಿ ಪ್ರಧಾನಿ ನರೇಂದ್ರಮೋದಿ ಅವರು ಉಚಿತ ಲಸಿಕೆ ಘೋಷಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರು ವಿವರಿಸಿದರು.

Donate Janashakthi Media

Leave a Reply

Your email address will not be published. Required fields are marked *