ಸಾರಿಗೆ ನೌಕರರ ಮೇಲೆ 6 ತಿಂಗಳ ಎಸ್ಮಾ ಜಾರಿ: ರಾಜ್ಯ ಸರ್ಕಾರ

ಬೆಂಗಳೂರು: ಸಾರಿಗೆ ನೌಕರರ ಮತ್ತೊಮ್ಮೆ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ಅಥವಾ ಮುಷ್ಕರವನ್ನು ಕೈಗೊಳ್ಳಬಾರದೆಂದು ಸರ್ಕಾರವು, ಕ್ರಮಕ್ಕೆ ಮುಂದಾಗಿದ್ದು, ಇದೀಗ ಸಾರಿಗೆ ನೌಕರರ ಮೇಲೆ 6 ತಿಂಗಳ ಎಸ್ಮಾ ಕಾಯ್ದೆಯನ್ನು ಜಾರಿಗೆ ತಂದಿದೆ.

ಕೆಎಸ್‌ಆರ್‌ಟಿಸಿ ಸೇವೆಯನ್ನು ಅಗತ್ಯ ಸೇವೆ ನಿರ್ವಹಣಾ ಕಾಯ್ದೆ(ಎಸ್ಮಾ) ಅಡಿ ತರಲು ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದ್ದು, ಅಧಿಸೂಚನೆಯ ಪ್ರಕಾರ ಜನವರಿ 1, 2023 ರಿಂದ ಜುಲೈ 31, 2023 ರವರೆಗೆ ಕಾಯ್ದೆ ಜಾರಿಯಲ್ಲಿರಲಿದೆ.

ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ನಡೆಸಲು ಮುಂದಾಗಿದ್ದ ಸಿಬ್ಬಂದಿಗಳಿಗೆ ಭಾರೀ ಹಿನ್ನಡೆಯುಂಟಾದಂತಾಗಿದೆ. ಖಾಯಂ ಆಧಾರದ ಮೇಲೆ ಅಥವಾ ಗುತ್ತಿಗೆ, ತಾತ್ಕಾಲಿಕ, ಹೊರಗುತ್ತಿಗೆ ಆಧಾರದ ಮೇಲೆ ಬಂದಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲು ನಿರಾಕರಿಸಿದರೆ ಅದು, ಸಾರ್ವಜನಿಕ ಉಪಯುಕ್ತ ಸೇವೆಗಳ ನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಸಿಬ್ಬಂದಿಗಳ ಮುಷ್ಕರ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುವಂತಾಗುತ್ತದೆ ಎಂದು ಸೂಚನೆಯಲ್ಲಿ ಸರ್ಕಾರ ತಿಳಿಸಿದೆ.

ಇದನ್ನು ಓದಿ: ಎಸ್ಮಾ ಎಂದರೇನು? ಜಾರಿಯಾದ್ರೆ ಏನಾಗುತ್ತೆ??

ಮುಷ್ಕರದಿಂದಾಗಿ ಸಾರ್ವಜನಿಕರ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಮೇಲೆ ಎಸ್ಮಾ ಜಾರಿ ಮಾಡುವಂತೆ ಕೆಎಸ್‌ಆರ್‌ಟಿಸಿಗೆ ಸರ್ಕಾರ ಸೂಚನೆ ನೀಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಕೆಎಸ್‌ಆರ್‌ಟಿಸಿ ತನ್ನ ಎಲ್ಲಾ ವಿಭಾಗಗಳು, ಕಾರ್ಯಾಗಾರಗಳು, ಕಚೇರಿಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಸರ್ಕಾರದ ಅಧಿಸೂಚನೆಯ ಪ್ರತಿಯನ್ನು ಹಾಕಬೇಕು ಮತ್ತು ಅಧಿಸೂಚನೆ ಬಗ್ಗೆ ನೌಕರರು ಮತ್ತು ಸಾರಿಗೆ ಸಂಘಟನೆಗಳ ಗಮನಕ್ಕೆ ತರಬೇಕೆಂದು ವರದಿಯಾಗಿದೆ.

ಇದನ್ನು ಓದಿ : 3ನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ – ಸರಕಾರಿ ಬಸ್ ಸ್ತಬ್ದ

6ನೇ ವೇತನ ಆಯೋಗದ ಅನ್ವಯ ಸಾರಿಗೆ ನಿಗಮಕ್ಕೆ ವೇತನ ಹೆಚ್ಚಳ, ವಜಾಗೊಂಡಿರುವ ನೌಕರರ ಮರುಸೇರ್ಪಡೆ, ನೌಕರರ ವಿರುದ್ಧದ ಪೊಲೀಸ್ ದೂರು ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರ ಸಂಘವು ಹಲವು ಹಂತಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *