ಬೆಂಗಳೂರು : ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೌಕರರು ಇಂದು ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ಇಂದು ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಸಾರಿಗೆ ನೌಕರರ ಜಾಥಾ ಇಂದು ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ. ರೈಲ್ವೇ ನಿಲ್ದಾಣದಿಂದ ವಿಧಾನಸೌಧಧವರೆಗೆ ಸಾರಿಗೆ ನೌಕರರು ಜಾಥಾ ಹೊರಡಲಿದ್ದಾರೆ. “ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ” ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸಲಿದ್ದಾರೆ. ಬಾಕಿ ವೇತನ, ಹಿರಿಯ ಅಧಿಕಾರಿಗಳ ಕಿರುಕುಳ, ವರ್ಗಾವಣೆ ಸಮಸ್ಯೆ ಇತ್ಯಾದಿ ಬೇಡಿಕೆಗಳ ಕುರಿತು ಇದೇ ವೇಳೆ ಸರಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.
ಸಾರಿಗೆ ನೌಕರರ ಪ್ರತಿಭಟನೆ ಕುರಿತು ಪ್ರತಿಕ್ರೀಯೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, “ರಾಜ್ಯ ಸರ್ಕಾರ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವುದರಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೆಲ್ಲ ಗಮನಿಸುತ್ತಿದ್ದರೆ ಸರಕಾರ ಮತ್ತು ಸಾರಿಗೆ ನೌಕರರ ನಡುವೆ ಇಂದು ಜಟಾಪಟಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ