ಬೆಳಗಾವಿ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಗೊಂದಲ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಠ್ಯ ಪುಸ್ತಕದಲ್ಲಿ ಬಳಸಿರುವ ಕವನ ಹಿಂಪಡೆಯುವುದಾಗಿ ಖ್ಯಾತ ಸಾಹಿತಿ ಡಾ. ಸರಜೂ ಕಾಟ್ಕರ್ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಗೊಂದಲದ ಹಿನ್ನೆಲೆಯಲ್ಲಿ ಒಂಬತ್ತನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ನಾನು ರಚಿಸಿದ ಶಬ್ದಗಳು ಎಂಬ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ. ಸರಜೂ ಕಾಟ್ಕರ್ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.
ದೇವನೂರು ಮಹಾದೇವ, ಜಿ.ರಾಮಕೃಷ್ಣ, ಎಸ್.ಜಿ ಸಿದ್ದರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಈರಪ್ಪ ಕಂಬಳಿ, ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಮತ್ತು ರೂಪ ಹಾಸನರವರು ಈಗಾಗಲೇ ತಮ್ಮ ಲೇಖನ/ ಕವಿತೆ/ ಪ್ರಬಂಧಕ್ಕೆ ನೀಡಿದ್ದ ಅನುಮತಿಯನ್ನು ವಾಪಸ್ಸು ಪಡೆದಿದ್ದಾರೆ.