ಬೆಂಗಳೂರು: 2023-24ನೇ ಸಾಲಿನ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಹಿರಿಯ
ಚಲನ ಚಿತ್ರ ಅಕಾಡಮಿ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರಮುಖ ಮೂರು ಮಂದಿಯ ಹೆಸರನ್ನು ಅಂತಿಮಗೊಳಿಸಿ ಅದರಲ್ಲಿ ಓರ್ವರನ್ನು ಜೀವಮಾನದ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು.
ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ.ಎಸ್ ಸತ್ಯು ಅವರನ್ನು ಜೀವಮಾನದ ಸಾಧನೆಗಾಗಿ ರಾಜ್ಯ ಸರ್ಕಾರ ಅವಿರೋದ ವಾಗಿ ಆಯ್ಕೆ ಮಾಡಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಅಧಿಕೃತ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ.
ಫೆಬ್ರವರಿ 29 ರಿಂದ ನಗರದಲ್ಲಿ ನಡೆಯುತ್ತಿರುವ 15 ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೊನೆಯ ದಿನವಾದ ಮಾರ್ಚ್ 7 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜೀವಮಾನ ಸಾಧನೆಗೆ ಪಾತ್ರರಾಗಿರುವ ಅಂತರಾಷ್ಟ್ರೀಯ ಖ್ಯಾತಿಯ ನಿರ್ದೇಶಕ ಎಂ.ಎಸ್ ಸತ್ಯು ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ
ಇದರ ಜೊತೆಗೆ ಕನ್ನಡ, ಏಷ್ಯನ್ ವಿಭಾಗ ಸೇರಿದಂತೆ ಜಾಗತಿಕ ವಿಭಾಗದ ವಿವಿಧ ಸ್ಪರ್ಧೆಯಲ್ಲಿ ಆಯ್ಕೆಯಾದ ಚಿತ್ರಗಳ ನಿರ್ದೇಶಕರು,ನಿರ್ಮಾಪಕರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ನಡೆಯಲಿದೆ.
ಅವರ ನಿರ್ದೇಶನದ ಹಿಂದಿ ಚಿತ್ರ ‘ಗರಂ ಹವಾ’ ಹಲವಾರು ರಾಷ್ಟ್ರೀಯ – ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ ‘ಬರ’ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು. ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ ‘ಫಿಲ್ಮ್ ಫೇರ್ ಪ್ರಶಸ್ತಿ’ಯನ್ನು ಪಡೆದಿತ್ತು. ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ.
ವಿಡಿಯೋ ನೋಡಿ : ಸಂಸದೀಯ ಪ್ರಜಾಸತ್ತೆಯ ಮೇಲೆ ಕೇಂದ್ರ ಸರ್ಕಾರದ ಕ್ರೂರ ಸವಾರಿ