ಬೆಳಗಾವಿ : ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಈಶ್ವರ್ ಖಂಡ್ರೆ ಇಬ್ಬರಲ್ಲಿ ಒಬ್ಬರನ್ನು ಹೈಕಮಾಂಡ್ ಆಯ್ಕೆ ಮಾಡಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ ಅವರು, ಹೈಕಮಾಂಡ್ ಮಟ್ಟದಲ್ಲಿ ಏನೇನು ಚರ್ಚೆ ನಡೆದಿದೆ ಎಂಬುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನ ಮತ್ತು ಖಂಡ್ರೆ ಅವರ ಹೆಸರು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ ಅಷ್ಟೇ ಎಂದರು.
ಇದನ್ನೂ ಓದಿ : ಭಾರಿ ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ
ಇನ್ನು ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ವಿಚಾರವಾಗಿ ಯಾವ ಮಾನದಂಡ ಅನುಸರಿಸುತ್ತಿದೆ ಎಂಬ ಅಂಶವೂ ನನಗೆ ಗೊತ್ತಿಲ್ಲ. ಹೈಕಮಾಂಡ್ ಹಿರಿಯ ನಾಯಕರ ನಡುವೆ ಏನೇನು ಚರ್ಚೆಗಳು ನಡೆಯುತ್ತಿವೆ ಎಂಬ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದಲ್ಲದೇ ಪೆಟ್ರೋಲ್, ಡೀಸೆಲ್, ಟೋಲ್ ದರ ಹೆಚ್ಚಳ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸತೀಶ್ ಅವರು, ಬಿಜೆಪಿ ಸ್ವತಃ ಪೆಟ್ರೋಲ್, ಡೀಸೆಲ್ ಮತ್ತು ಟೋಲ್‌ಗಳ ಬೆಲೆಗಳನ್ನು ಹೆಚ್ಚಳ ಮಾಡಿತ್ತು. 10 ವರ್ಷಗಳ ಹಿಂದೆ ಇಂಧನ ಬೆಲೆಗಳನ್ನು ಎಷ್ಟು ಬಾರಿ ಹೆಚ್ಚಿಸಲಾಗಿದೆ ಗೊತ್ತಲ್ವಾ? ಆಗ ಬಿಜೆಪಿ ಏಕೆ ಪ್ರತಿಭಟನೆ ಮಾಡಲಿಲ್ಲ ಎಂದು ತಿವಿದರು. ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಒದಗಿಸುವ ಅಗತ್ಯವು ಬೆಲೆ ಏರಿಕೆ ಅನಿವಾರ್ಯವಾಗಿಸಿದೆ ಎಂದು ದರ ಏರಿಕೆ ಕುರಿತು ಸಮರ್ಥಿಸಿಕೊಂಡರು.
ಇದನ್ನೂ ನೋಡಿ : ಎಂಪುರನ್ ಸಿನಿಮಾದ 25 ಸೀನ್ ಗಳ ಕತ್ತರಿ: ಅಭಿವ್ಯಕ್ತಿ ಸ್ವಾತಂತ್ರ್ಯದ ಹಿನ್ನಡೆ, ಹಿಂದುತ್ವದ ಮೇಲುಗೈ?