ಸತ್ಯಪಾಲ್ ಮಲೀಕ್ ಸ್ವತಃ ಠಾಣೆಗೆ ಬಂದಿದ್ದರು, ವಶಕ್ಕೆ ಪಡೆದಿದ್ದೆವು ಎಂಬುದು ತಪ್ಪಾದ ಮಾಹಿತಿ : ದೆಹಲಿ ಪೊಲೀಸರು

ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯನ್ನು ದೆಹಲಿ ಪೊಲೀಸರು ತಳ್ಳಿಹಾಕಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸರು, ಸತ್ಯಪಾಲ್ ಮಲೀಕ್ ಸ್ವತಃ ಆರ್ ಕೆ ಪುರಂ ಪೊಲೀಸ್ ಠಾಣೆಗೆ ಅವರ ಬೆಂಬಲಿಗರೊಂದಿಗೆ ಆಗಮಿಸಿದ್ದರು. ಸತ್ಯಪಾಲ್ ಮಲೀಕ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾದ ಮಾಹಿತಿಯನ್ನು ಹರಡಲಾಗುತ್ತಿದೆ. ಸ್ವ ಇಚ್ಛೆಯಿಂದ ವಾಪಸ್ ತೆರಳುವುದಕ್ಕೆ ಅವರು ಮುಕ್ತರಾಗಿದ್ದಾರೆ ಎಂಬುದನ್ನೂ ತಿಳಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಪುಲ್ವಾಮ ದಾಳಿಗೆ ಪ್ರಧಾನಿ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ ಎಂದಿದ್ದ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

ಆರ್ ಕೆ ಪುರಂ ಪ್ರದೇಶದಲ್ಲಿನ ಪಾರ್ಕ್ ನಲ್ಲಿ ಪೂರ್ವಾನುಮತಿ ಇಲ್ಲದೇ ಸಭೆ ನಡೆಸಿದ್ದರ ವಿಷಯವಾಗಿ ಮಲೀಕ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಮುನ್ನ ಶುಕ್ರವಾರದಂದು ಮಲೀಕ್ ಅವರಿಗೆ ಸಿಬಿಐ ಸಮನ್ಸ್ ಜಾರಿಯಾಗಿತ್ತು. ಜಮ್ಮು-ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ಸರ್ಕಾರಿ ನೌಕರರಿಗೆ ಸಮೂಹ ವಿಮೆ ಮಾಡಿಸುವ ವಿಷಯದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಸಿಬಿಐ ಸಮನ್ಸ್ ಜಾರಿ ಮಾಡಿತ್ತು.

Donate Janashakthi Media

Leave a Reply

Your email address will not be published. Required fields are marked *