ಸಾವಿನ ನಂತರವೂ ನೆನೆಯುವ ಏಕಮೇವ ತಾರೆ ಡಾ.ರಾಜ್‌ಕುಮಾರ್‌: ಸಿಎಂ ಬೊಮ್ಮಾಯಿ

ಬೆಂಗಳೂರು: ಸಾಧಕನಿಗೆ ಸಾವು ಅಂತ್ಯವಲ್ಲ. ಅವರ ಸಾವಿನ ನಂತರವೂ ಬದುಕಬಲ್ಲರು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಮೌಲಿಕ ಬದುಕನ್ನು ಬದುಕಿದರೆ ಸಾವಿನ ನಂತರವೂ ಜನ ನಮ್ಮನ್ನು ನೆನೆಯುತ್ತಾರೆ. ಕರ್ನಾಟಕದ ಅಂಥ ಏಕಮೇವ ತಾರೆ ಡಾ.ರಾಜ್‍ಕುಮಾರ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ಡಾ.ರಾಜ್‌ಕುಮಾರ್‌ ಶೈಕ್ಷಣಿಕ ಆ್ಯಪ್‌ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕೊರೊನಾ ಸಂಕಷ್ಟ ಕಾಲದಲ್ಲಿ ಮಕ್ಕಳ ಶಿಕ್ಷಣದ ಸಮಸ್ಯೆಯಿಂದಾಗಿ ಸರಿಯಾದ ಶಿಕ್ಷಣ ಸಿಗದೆ ಮಕ್ಕಳು ಪರದಾಡುವಂತಾಗಿದೆ. ಇಂಥ ಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಸಹಾಯಾರ್ಥಕ್ಕಾಗಿ ಡಾ.ರಾಜ್ ಕುಮಾರ್ ಅಕಾಡೆಮಿ ಮುಂದಾಗಿದ್ದು ಹೊಸ ಆಪ್ ಅನ್ನು ಬಿಡುಗಡೆ ಮಾಡಿದೆ.

ಇದನ್ನು ಓದಿ: 9 -10ನೇ ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ

ಡಾ.ರಾಜ್‍ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಬಹಳ ಎತ್ತರಕ್ಕೆ ಏರಬಹುದು. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಆ್ಯಪ್ ಸಹಕಾರಿಯಾಗಲಿದೆ. 21ನೇ ಶತಮಾನ ಜ್ಞಾನವಂತರಿಗೆ ಸೇರಿದ್ದು. ಜ್ಞಾನಕ್ಕೆ ಬೆಲೆ ಹಾಗೂ ಬಲ ಬಂದಿದೆ. ಜ್ಞಾನದ ಕ್ಷೇತ್ರದಲ್ಲಿರುವ ಮಕ್ಕಳಿಗೆ ತರ್ಕ ಬದ್ಧವಾಗಿ ಚಿಂತನೆ ಮಾಡಲು ಡಾ.ರಾಜ್‌ಕುಮಾರ್‌ ಶೈಕ್ಷಣಿಕ ಆ್ಯಪ್‌ ಸಹಕಾರಿಯಾಗಿದೆ ಎಂದರು.

ಡಾ.ರಾಜ್‌ಕುಮಾರ್‌ ಅವರ ಸರಳತೆ, ನಡೆ, ನುಡಿ, ಮೌಲ್ಯಗಳನ್ನು ವಿಶೇಷವಾಗಿ ಅಧಿಕಾರದಲ್ಲಿರುವವರು, ಜನಪ್ರಿಯ ವ್ಯಕ್ತಿಗಳು ಕಲಿಯಬೇಕು. ಆಗಷ್ಟೇ ಹುಟ್ಟಿರುವ ಮಗುವಿನ ಮುಗ್ಧತೆ ಅವರಲ್ಲಿತ್ತು. ರಾಜ್‌ಕುಮಾರ್‌ ಅವರಲ್ಲಿದ್ದ ಸರಳತನ ಎಲ್ಲರಲ್ಲೂ ಕಂಡುಬರಲು ಸಾಧ್ಯವಿಲ್ಲ. ಬಹಳಷ್ಟುಸಾಧನೆ ಮಾಡಿದರೂ ಅವರಲ್ಲಿನ ಸರಳತನ ಕೊನೆಯವರೆಗೂ ಮಾಯವಾಗಲಿಲ್ಲ ಎಂದು ಸ್ಮರಿಸಿದರು.

ಇದನ್ನು ಓದಿ: ಪೌಷ್ಠಿಕ ಆಹಾರದ ಬದಲಿಗೆ ನಗದು ವರ್ಗಾವಣೆ: ಅಂಗನವಾಡಿ ನೌಕರರ ರಾಜ್ಯವ್ಯಾಪಿ ಧರಣಿ

ಡಾ.ರಾಜ್‌ಕುಮಾರ್‌ ಅವರ ಕುಟುಂಬದವರೊಂದಿಗೆ ನನ್ನ ಅವಿನಾಭಾವ ಸಂಬಂಧವಿದೆ. ರಾಘವೇಂದ್ರ ರಾಜ್‌ಕುಮಾರ್‌, ಶಿವರಾಜ್‌ ಕುಮಾರ್‌, ಪುನೀತ್‌ ರಾಜ್‌ಕುಮಾರ್‌ ಮೊದಲಿನಿಂದಲೂ ಆತ್ಮೀಯರು. ಡಾ.ರಾಜ್‍ಕುಮಾರ್ ಸಿನಿಮಾದ ಸೂಪರ್ ಸ್ಟಾರ್ ಅಷ್ಟೇ ಅಲ್ಲ. ಆಕಾಶದಲ್ಲಿನ ಹೊಳೆಯುವ ನಕ್ಷತ್ರ. ಅವರ ಶಿಕ್ಷಣದ ಕನಸನ್ನು ಈಗ ಅವರ ಕುಟುಂಬದವರು ಸಾಕಾರ ಮಾಡುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಕುಟುಂಬದ ಹಾಜರಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ದಂಪತಿ, ಯುವ ರಾಜ್ ಕುಮಾರ್ ಸೇರಿದ್ದಂತೆ ಅನೇಕರು ಹಾಜರಿದ್ದರು.

Donate Janashakthi Media

Leave a Reply

Your email address will not be published. Required fields are marked *