ಸಾವಿತ್ರಿಬಾಯಿ ಫುಲೆ ಜನ್ಮದಿನ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ

ರಾಯಚೂರು: ಜಿಲ್ಲೆಯ ಗಬ್ಬೂರು ಹೋಬಳಿಯಲ್ಲಿ ಸಾವಿತ್ರಿ ಬಾಯಿ ಫುಲೆ ರವರ ಜನ್ಮ ದಿನಾಚರಣೆ ಪ್ರಯುಕ್ತ ಮೆಟ್ರಿಕ್ ಪೂರ್ವ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ “ಎಸ್‌ಎಸ್‌ಎಲ್‌ಸಿ ನಂತರ ಮುಂದೇನು?” ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಪೊಲೀಸ್ ಇನ್ಸ್ ಪೆಕ್ಟರ್ ಬಸವಲಿಂಗಪ್ಪ ಭಾಗವಹಿಸಿ ತಾವು ಬೆಳೆದು ಬಂದ ರೀತಿಯ ಬಗೆ ತಿಳಿಸುತ್ತಾ, ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು ಎಂಬ ವಿಷಯದ ಮೇಲೆ ಸ್ಪರ್ಧಾತ್ಮಕ ಯುಗದಲ್ಲಿ ಇರುವ ಹತ್ತಾರು ಕೋರ್ಸ್ ಗಳ ಬಗ್ಗೆ ಮಾರ್ಗದರ್ಶನ ಮಾಡಿದರು.

ವಿದ್ಯಾರ್ಥಿಗಳು ತುಂಬಾ ಉತ್ಸುಕತೆಯಿಂದ ಭಾಗವಹಿಸಿ ಮಾರ್ಗದರ್ಶನ ಪಡೆದು ಒಟ್ಟು ಸಂವಾದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಗಬ್ಬೂರು ಹೋಬಳಿ ಘಟಕದ ಅಧ್ಯಕ್ಷ ಹನುಮಂತ ರವರು ಭಾಗವಹಿಸಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ದಲ್ಲಿ ತೊಡಗಬೇಕು, ಎಲ್ಲರಿಗೂ ಉಚಿತ ಮತ್ತು ಕಡ್ಡಾಯ ಹಾಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಒಗ್ಗಟ್ಟಾಗಿ ನಮ್ಮ ಹಕ್ಕುಗಳಿಗಾಗಿ ಹೊರಡಬೇಕು ಎಂದು ಮಾತನಾಡಿದರು.

ಕಾರ್ಯಕ್ರಮದ ಪ್ರಸ್ತಾವನೆ ಮಾಡಿದ ಹಾಸ್ಟೆಲ್ ಘಟಕದ ಕಾರ್ಯದರ್ಶಿ ಸಂಗಮೇಶ್ ಹಳ್ಳಿಗಾಡಿನ ವಿದ್ಯಾರ್ಥಿಗಳು ನಾವು ಇಂತಹ ಸ್ಪರ್ಧಾತ್ಮಕ ಜಗತ್ತಿನಲ್ಲಿ ದೊಡ್ಡ ಸ್ಥಾನಕ್ಕೆ ಹೋಗುವ ಎಲ್ಲಾ ಅರ್ಹತೆ ಇದ್ದರು, ಸರಿಯಾದ ಮಾರ್ಗದರ್ಶನ ಇಲ್ಲದೆ ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಂತಹ ಕಾರ್ಯಕ್ರಮಗಳು ನಮಗೆ ಹೆಚ್ಚು ಉಪಯುಕ್ತವಾಗುತ್ತವೆ ಎಂದು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸ್ಟೆಲ್ ಘಟಕದ ಅಧ್ಯಕ್ಷ ಜಗದೀಶ್ ವಹಿಸಿಕೊಂಡಿದ್ದರು. ಮುಖಂಡರಾದ ಶ್ರೀನಿವಾಸ, ಚಂದ್ರಕಾಂತ್, ಮಂಜುನಾಥ್, ಮನೋಜ, ಅನಿಲ್ , ನಿತ್ಯಾನಂದ ಸೇರಿದಂತೆ ಹಾಸ್ಟೆಲ್ ನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *