ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ತಿರಸ್ಕರಿಸಿದ್ದಕ್ಕಾಗಿ ಧಾರವಾಡ ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆಯು ಉತ್ತರ ಕನ್ನಡ ಜಿಲ್ಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಳಿಯಾಳ ಶಾಖೆಗೆ 85,177 ರೂ. ದಂಡ ವಿಧಿಸಿದೆ.
ಹುಬ್ಬಳ್ಳಿಯ ರಾಜನಗರದ ಸರ್ಕಾರಿ ಪಿಯು ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ವಾದಿರಾಜಾಚಾರ್ಯ ಇನಾಮದಾರ್ ಅವರು, ಸಾಕಷ್ಟು ಬ್ಯಾಂಕ್ ಬ್ಯಾಲೆನ್ಸ್ ಇದ್ದರೂ ಕನ್ನಡದಲ್ಲಿ ಬರೆದಿದ್ದರಿಂದ 6 ಸಾವಿರ ರೂ.ಚೆಕ್ ಅನ್ನು ಬ್ಯಾಂಕ್ ತಿರಸ್ಕರಿಸಿದೆ ಎಂದು ದೂರು ನೀಡಿದ್ದರು.
ಈ ದೂರು ಪರೀಶಿಲಿಸಿದ ಆಯೋಗವು ದೂರುದಾರರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂ ಕ್ಕಿಂತ ಹೆಚ್ಚು ಹಣ ಇದ್ದರೂ ಕೂಡ ಕೇವಲ 6 ಸಾವಿರ ರೂ. ಮೌಲ್ಯದ ಚೆಕ್ಕನ್ನು ಕನ್ನಡ ಭಾಷೆಯಲ್ಲಿ ಬರೆದುದಕ್ಕಾಗಿ ಅಮಾನ್ಯ ಮಾಡಿರುವುದನ್ನ ಸೇವಾ ನ್ಯೂನ್ಯತೆ ಎಂದು ಪರಿಗಣಿಸಿ ಫಿರ್ಯಾದಿರಿಗೆ ಪರಿಹಾರ ಮತ್ತು ದಂಡ ರೂಪದಲ್ಲಿ ಒಟ್ಟು 85,177 ರೂ.ಗಳನ್ನು ಪಾವತಿಸುವಂತೆ ಆದೇಶಿಸಿದೆ.
ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ.
ಬ್ಯಾಂಕ್‌ಗಳಲ್ಲಿ ತ್ರಿಭಾಷಾ ನೀತಿಯಡಿ ಪ್ರಾದೇಶಿಕ ಭಾಷೆಗಳ ಬಳಕೆಯನ್ನು ಎತ್ತಿ ಹಿಡಿದಿರುವ ತೀರ್ಪು ಮಹತ್ವ ಪಡೆದುಕೊಂಡಿದೆ.
Ajunchinnanahalli Hulikunte kudligi taluk vijayanagara district
Arjuna chinnanahalli
Arjuna chinnanahalli kudligi taluk vijayanagara district