ಕೆಂಪು ಕೋಟೆ ಮೇಲೆ ದಾಳಿ: ಲಷ್ಕರ್‌ ಭಯೋತ್ಪಾದಕನಿಗೆ ಗಲ್ಲು ಶಿಕ್ಷೆ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: 22 ವರ್ಷಗಳ ಹಿಂದೆ 2000ನೇ ಇಸವಿಯ ಡಿಸೆಂಬರ್‌ 22ರಂದು  ಕೆಂಪುಕೋಟೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಲಕ್ಷರ್-ಎ-ತೊಯ್ಬಾ ಉಗ್ರ ಮೊಹಮದ್‌ ಆರಿಫ್‌ಗೆ ನೀಡಿದ್ದ ಗಲ್ಲು ಶಿಕ್ಷೆಯ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಮರುಶೀಲನಾ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡು ಪೀಠವು ವಿಚಾರಣೆ ನಡೆಸಿತ್ತು. ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಮೊಹಮ್ಮದ್ ಆರಿಫ್ ಅಲಿಯಾಸ್ ಅಶ್ಫಾಕ್‌ಗೆ ಸುಪ್ರೀಂ ಕೋರ್ಟ್‌ ಪ್ರಕರಣದಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ, ಇದನ್ನು ಪ್ರಶ್ನಿಸಿ ಮೊಹಮ್ಮದ್ ಆರಿಫ್ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ವಿದ್ಯುನ್ಮಾನ ದಾಖಲೆಗಳನ್ನು ಪರಿಗಣಿಸಬೇಕೆಂಬ ಮನವಿಯನ್ನು ನಾವು ಸ್ವೀಕರಿಸಿದ್ದೇವೆ. ಆತನ ಅಪರಾಧ ಸಾಬೀತಾಗಿದೆ. ಈ ನ್ಯಾಯಾಲಯ ತೆಗೆದುಕೊಂಡ ದೃಷ್ಟಿಕೋನವನ್ನು ನಾವು ದೃಢೀಕರಿಸುತ್ತೇವೆ ಮತ್ತು ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸುತ್ತೇವೆ ಎಂದು ಹೇಳಿದೆ.

ಡಿಸೆಂಬರ್ 22, 2000 ರಂದು ಕೆಂಪು ಕೋಟೆಯ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿದ್ದರು. ದಾಳಿ ನಡೆದ ಮೂರು ದಿನಗಳ ನಂತರ ಮೊಹಮ್ಮದ್ ಆರಿಫ್‌ನನ್ನು ಬಂಧಿಸಲಾಗಿತ್ತು. ಪಾಕಿಸ್ತಾನದ ಅಬೋಟಾಬಾದ್‌ನ ಮೊಹಮ್ಮದ್ ಆರಿಫ್, ದೆಹಲಿಯ ಕೆಂಪು ಕೋಟೆಗೆ ನುಗ್ಗಿ ರಜಪೂತಾನ ರೈಫಲ್ಸ್‌‌ನ ಏಳನೇ ಬೆಟಾಲಿಯನ್‌ನ ಕಾವಲುಗಾರರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ ಆರು ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ.

ಮೊದಲ ವಿಚಾರಣೆಯನ್ನು ಅಕ್ಟೋಬರ್ 24, 2005 ರಂದು ಅವರನ್ನು ಅಪರಾಧಿ ಎಂದು ಘೋಷಿಸಿತು ಮತ್ತು ಅಕ್ಟೋಬರ್ 31, 2005 ರಂದು ಅವರಿಗೆ ಮರಣದಂಡನೆ ವಿಧಿಸಿತು. ಆದರೆ, ಸೆಷನ್ಸ್‌ ಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮೊಹಮ್ಮದ್‌ ಆರಿಫ್ ಈ ನಿರ್ಧಾರದ ವಿರುದ್ಧ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ದೆಹಲಿ ಹೈಕೋರ್ಟ್‌ ಸೆಪ್ಟೆಂಬರ್ 13, 2007 ರಂದು ಆದೇಶದ ಮೂಲಕ ಅವರ ಅಪರಾಧ ಮತ್ತು ಮರಣದಂಡನೆಯನ್ನು ಎತ್ತಿಹಿಡಿಯಿತು. ಆದರೆ ಹೈಕೋರ್ಟ್ ತನ್ನ ಮರಣದಂಡನೆ ತೀರ್ಪನ್ನು ಎತ್ತಿಹಿಡಿದಿದೆ. ಆದರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾದ ಇತರ ಆರು ಮಂದಿಯನ್ನು ಖುಲಾಸೆಗೊಳಿಸಿದೆ.

ದೆಹಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆಗಸ್ಟ್ 10, 2011ರಂದು, ಸುಪ್ರೀಂ ಕೋರ್ಟ್ ಮೊಹಮ್ಮದ್ ಆರಿಫ್ ಮರಣದಂಡನೆಯನ್ನು ಎತ್ತಿಹಿಡಿದಿತ್ತು. ವಿಚಾರಣೆ ವೇಳೆ ಅಪರಾಧದ ವಿರುದ್ಧ ಮೊಹಮ್ಮದ್‌ ಆರಿಫ್‌ ಸಲ್ಲಿಸಿದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್‌, ಮೇಲ್ಮನವಿದಾರನು ವಿದೇಶಿ ಪ್ರಜೆಯಾಗಿದ್ದು, ಯಾವುದೇ ಅನುಮತಿ ಅಥವಾ ಸಮರ್ಥನೆ ಇಲ್ಲದೆ ಭಾರತಕ್ಕೆ ಪ್ರವೇಶಿಸಿ, ವಂಚನೆ ಮತ್ತು ವಿವಿಧ ಕೃತ್ಯಗಳನ್ನು ಮಾಡುವ ಮೂಲಕ ಪಿತೂರಿಯನ್ನು ಮಾಡಿದ್ದಾರೆ ಎಂದು ತೀರ್ಪು ನೀಡಿತ್ತು.

2005ರಲ್ಲಿ ಸೆಷನ್ಸ್ ನ್ಯಾಯಾಲಯವು ಆತನಿಗೆ ನೀಡಿದ್ದ ಮರಣದಂಡನೆ ಪ್ರಶ್ನಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತ್ತು. ಇದನ್ನು ದೆಹಲಿ ಹೈಕೋರ್ಟ್ ದೃಢೀಕರಿಸಿತ್ತು. ಆದರೆ 2014ರಲ್ಲಿ ಆತನ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

Donate Janashakthi Media

Leave a Reply

Your email address will not be published. Required fields are marked *