ನವದೆಹಲಿ: 2022 ರಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ ಮತ್ತು ಇತರ ಪ್ರಮುಖ ರಾಜಕೀಯ ವ್ಯಕ್ತಿಗಳ ವಿರುದ್ಧ ನಡೆಯುತ್ತಿರುವ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತೆಡೆ ನೀಡಿದೆ. ಭ್ರಷ್ಟಾಚಾರ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿದ್ದ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗಾಗಿ ಕಾಂಗ್ರೆಸ್ ತೀವ್ರವಾಗಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆನ್ನ ಪ್ರಮುಖ ನಾಯಕರ ಮೇಲೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಮಾಡಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಹಾಗಾಗಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠ ಸಿದ್ದರಾಮಯ್ಯ ಮತ್ತು ಇತರ ನಾಯಕರ ವಿರುದ್ಧದ ಪ್ರಕಣಕ್ಕೆ ತಡೆ ನೀಡಿದೆ.
ಇದನ್ನೂ ಓದಿ: ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗೆ 5 ವರ್ಷ ಕನಿಷ್ಠ ಬೆಂಬಲ ಬೆಲೆ – ಕೇಂದ್ರ ಸರ್ಕಾರದ ಪ್ರಸ್ತಾಪ
ಸಂವಿಧಾನದ ಪರಿಚ್ಛೇದ 19(1)(ಎ)ನಲ್ಲಿ ಪ್ರತಿಪಾದಿಸಿರುವ ಭಿನ್ನಾಭಿಪ್ರಾಯಗಳ ಮೂಲಭೂತ ಹಕ್ಕನ್ನು ನ್ಯಾಯಸಮ್ಮತವಾಗಿ ಬಳಸಿಕೊಂಡು ಈ ಪ್ರತಿಭಟನೆ ನಡೆಸಲಾಗಿತ್ತು ಎಂದು ಸಿದ್ದರಾಮಯ್ಯ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಭಾವುಕರಾಗಿ ವಾದಿಸಿದ್ದಾರೆ. ಶಾಂತಿಯುತ ರಾಜಕೀಯ ಪ್ರತಿಭಟನೆಗೆ ದಂಡ ವಿಧಿಸುವುದು ಅಪಾಯಕಾರಿ ಪೂರ್ವನಿದರ್ಶನವಾಗಿದ್ದು, ಪ್ರಜಾಸತ್ತಾತ್ಮಕ ಅಭಿವ್ಯಕ್ತಿಯನ್ನು ನಿಗ್ರಹಿಸುತ್ತದೆ ಎಂದು ಸಿಂಘ್ವಿ ಸುಪ್ರಿಂಕೋರ್ಟ್ನಲ್ಲಿ ವಾದಿಸಿದ್ದಾರೆ.
ಆದಾಗ್ಯೂ, ಸಾರ್ವಜನಿಕ ಪ್ರತಿಭಟನೆಯ ವಿಷಯಗಳಲ್ಲಿ ರಾಜಕೀಯ ಸ್ಥಾನಮಾನವನ್ನು ವಿಶೇಷ ಸವಲತ್ತುಗಳಾಗಿ ಪರಿಗಣಿಸುವ ಬಗ್ಗೆಗಿನ ಕಲ್ಪನೆಯನ್ನು ವಿಚಾರಣೆ ವೇಳೆ ನ್ಯಾಯಮೂರ್ತಿ ಮಿಶ್ರಾ ಅವರು ಪ್ರಶ್ನಿಸಿದ್ದಾರೆ. ಅಂತಹ ಸಂದರ್ಭಗಳಲ್ಲಿ ರಾಜಕಾರಣಿಗಳಿಗೆ ಅವಕಾಶ ನೀಡುವುದು ಕಾನೂನಿನ ಅನ್ವಯದಲ್ಲಿ ಇಬ್ಬಗೆಯ ನೀತಿಯನ್ನು ಸೃಷ್ಟಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಮೂರ್ತಿ ರಾಯ್ ಅವರು ಪ್ರಕರಣದ ಮುಂದಿನ ವಿಚಾರಣೆಗೆ ತಡೆ ನೀಡಿದ್ದಾರೆ. ಫೆಬ್ರವರಿ 26, 2024 ರಂದು ವಿಶೇಷ ನ್ಯಾಯಾಲಯದ ಮುಂದೆ ಸಿದ್ದರಾಮಯ್ಯ ಅವರು ಹಾಜರಾಗುವುದನ್ನು ಕಡ್ಡಾಯಗೊಳಿಸಿದ್ದ ಕರ್ನಾಟಕ ಹೈಕೋರ್ಟ್ನ ನಿರ್ದೇಶನವನ್ನು ಸುಪ್ರೀಂಕೋರ್ಟ್ ಅಮಾನತುಗೊಳಿಸಿದೆ.
ಇದನ್ನೂ ಓದಿ: ಟಿಪ್ಪು ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್ | ನಮ್ಮ ಕಾರ್ಯಕರ್ತರು ಕಾವಲು ಕಾಯುತ್ತಾರೆ ಎಂದ ಡಿವೈಎಫ್ಐ!
2022ರ ಏಪ್ರಿಲ್ 14ರಂದು ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಗುಂಪು ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿತ್ತು. ಈ ವೇಳೆ ಪ್ರತಿಭಟನಾಕಾರರ ವಿರುದ್ಧ ಸೆಕ್ಷನ್ 143 ಐಪಿಸಿ ಮತ್ತು ಕರ್ನಾಟಕ ಪೊಲೀಸ್ ಕಾಯಿದೆ, 1963 ರ ಸೆಕ್ಷನ್ 103 ರ ಅಡಿಯಲ್ಲಿ ಕಾನೂನುಬಾಹಿರವಾಗಿ ಸಭೆ ನಡೆಸಲಾಗಿದೆ ಎಂದು ಆರೋಪಿಸಲಾಗಿ ಪ್ರಕರಣ ದಾಖಲಿಸಲಾಗಿತ್ತು.
ಸಿದ್ದರಾಮಯ್ಯ ಅವರ ಇದ್ದ ಈ ಪ್ರತಿಭಟನೆಯು ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನಲ್ಲಿ ಮೆರವಣಿಗೆಗಳನ್ನು ನಿಷೇಧಿಸುವ ಹೈಕೋರ್ಟ್ ಆದೇಶದ ಹೊರತಾಗಿಯೂ ನಡೆಸಲಾಗಿತ್ತು. ಹೈಕೋರ್ಟ್ ಆದೇಶಕ್ಕೂ ಮುನ್ನ ಈ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಪೊಲೀಸರ ಕ್ರಮ ದುರುದ್ದೇಶದಿಂದ ಮತ್ತು ಕಿರುಕುಳ ನೀಡುವ ಉದ್ದೇಶದಿಂದ ನಡೆದಿದೆ ಎಂದು ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ವಾದಿಸಿದ್ದರು.
ವಿಡಿಯೊ ನೋಡಿ: ಗಾಜಾ ಹತ್ಯಾಕಾಂಡ | ಇಸ್ರೇಲ್ ವಿರುದ್ಧ ಜನಾಕ್ರೋಶ – ಪ್ಯಾಲೆಸ್ಟೈನ್ ಪರ ಮಿಡಿದ ಜಗತ್ತು.