ನವದೆಹಲಿ: ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದ ಕರ್ನಾಟಕ ರಾಜ್ಯ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ ಅರ್ಜಿದಾರರ ಮೇಲೆ ಗರಂ ಆಗಿತು.
ವಿಚಾರಣೆ ಮುಂದೂಡುವಂತೆ ಕೋರಿದ ಕೆಲವು ಅರ್ಜಿದಾರರ ಮನವಿಯ ಬಗ್ಗೆ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ತರಾಟೆಗೆ ತೆಗೆದುಕೊಂಡು ರಾಜ್ಯ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿ, ಸೆಪ್ಟಂಬರ್ 5ರಂದು ವಿಚಾರಣೆ ಮುಂದೂಡಿದೆ.
ಅರ್ಜಿ ವಿಚಾರಣೆಯನ್ನು ಮುಂದೂಡಬೇಕೆಂದು ಮನವಿ ಮಾಡಿದ ಅರ್ಜಿದಾರರ ಪರ ವಕೀಲ ವಾದಕ್ಕೆ ನ್ಯಾಯಪೀಠ ಇದು ಫೋರಂ ಶಾಪಿಂಗ್ ಅಲ್ಲ. ಹೀಗಾಗಿ ನೀವು ಕೇಳಿದ ಸಮಯದಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಈ ರೀತಿಯ ವರ್ತನೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿತು.
ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅರ್ಜಿದಾರರ ಮನವಿ ಪ್ರತಿಕ್ರಿಯೆ ನೀಡಿ, ಅರ್ಜಿದಾರರು ಈ ಹಿಂದೆ ಆರು ಬಾರಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಈಗ ವಿಚಾರಣೆ ವೇಳೆ ಮುಂದೂಡಿಕೆಗೆ ಮನವಿ ಮಾಡುತ್ತಿದ್ದಾರೆ. ಇದು ಸರಿಯಲ್ಲ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.
ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ತಂಡ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ‘ಮುಸ್ಲಿಮ್ ಮಹಿಳೆಯರು ಹಿಬಾಜ್ ಧರಿಸುವುದು ಇಸ್ಲಾಮ್‌ನಲ್ಲಿ ಅಗತ್ಯ ಧಾರ್ಮಿಕ ಆಚರಣೆಯಲ್ಲ‘ ವಜಾಗೊಳಿಸಿತು.
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹಲವು ಮಂದಿ ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.