ಚುನಾವಣಾ ಆಯೋಗದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ:  ನ್ಯಾಯಾಲಯಗಳ ಹೇಳಿಕೆಯ ವಿರುದ್ಧ ಪ್ರತಿ ದೂರು ಸಲ್ಲಿಸುವುದಕ್ಕಿಂತ ಸಾಂವಿಧಾನಿಕ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದ ಕರ್ತವ್ಯವಾಗಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಮದ್ರಾಸ್‌ ಹೈಕೋರ್ಟ್‌ನ ಕೊಲೆ ಆಪಾದನೆ ಹೇಳಿಕೆಯನ್ನು ಪ್ರಶ್ನೆ ಮಾಡಿದ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತು.

ಇದನ್ನು ಓದಿ: ಅಧಿಕಾರಿಗಳನ್ನು ಜೈಲಿಗೆ ಹಾಕಿದರೆ ಆಮ್ಲಜನಕ ಬರುವುದೆ: ಸುಪ್ರೀಂ ಕೋರ್ಟ್‌

ಹೈಕೋರ್ಟ್‌ ಆಪಾದನೆ ಹಾಗೂ ಮೌಖಿಲ ಆದೇಶಗಳ ವರದಿಯನ್ನು ಮಾಧ್ಯಮಗಳಲ್ಲಿ ಪ್ರಕಟಿಸದಂತೆ ತಡೆಒಡ್ಡುವಂತೆ ಚುನಾವಣಾ ಆಯೋಗ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಕೋವಿಡ್‌ ವಿಷಮ ಪರಿಸ್ಥಿತಿಗೆ ಕೇಂದ್ರ ಚುನಾವಣಾ ಆಯೋಗವೇ ಕಾರಣವಾಗಿದೆ. ಚುನಾವಣಾ ಪ್ರಚಾರಗಳು ಸಮಾವೇಶಗಳು ನಡೆಯುವ ಸಂದರ್ಭಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸದ ಕಾರಣಕ್ಕೆ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ಈ ಹಿಂದೆ ಹೇಳಿತ್ತು.

ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಂ ಆರ್ ಶಾ ಅವರ ಪೀಠವು ಕೆಲ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದೆ. ಪ್ರಜಾಪ್ರಭುತ್ವದ ಎಲ್ಲಾ ಅಂಗಸಂಸ್ಥೆಗಳು ಕಾರ್ಯನಿರ್ವಹಿಸುವ ಸಾಂವಿಧಾನಿಕ ಚೌಕಟ್ಟಿನಲ್ಲಿ ಸಂಸ್ಥೆಯೊಂದು ಈ ರೀತಿಯ ಮನವಿ ಮಾಡುವುದು ಸರಿಯೇ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಇದನ್ನು ಓದಿ: ಆಮ್ಲಜನಕ ಕೊರತೆ-ಇದು ನರಮೇಧಕ್ಕೆ ಸಮ: ಅಲಹಾಬಾದ್‌ ಹೈಕೋರ್ಟ್‌

ಹೈಕೋರ್ಟ್‌ ನೀಡಿರುವ ಪ್ರತಿಕ್ರಿಯೆ ಕಟುವಾಗಿರಬಹುದು. ಆದರೆ, ಆ ಪ್ರತಿಕ್ರಿಯೆಗಳು ನ್ಯಾಯಾಂಗದ ಆದೇಶದ ಭಾಗವಾಗಿದ್ದು, ಅವುಗಳನ್ನು ಆದೇಶದಿಂದ ತೆಗದು ಹಾಕಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಡಿಜಿಟಲ್ ಮಾಧ್ಯಮ ಈಗಿನ ಸಂದರ್ಭದಲ್ಲಿ ವರದಿ ಮಾಡುವುದನ್ನು ಉಲ್ಲೇಖಿಸಿದ ನ್ಯಾಯಾಲಯ ಜನ ಮಾಹಿತಿಗಾಗಿ ಅಂತರ್ಜಾಲವನ್ನು ಅವಲಂಬಿಸಿದ್ದಾರೆ. ಆದ್ದರಿಂದ ವರದಿ ಮಾಡದಂತೆ ನವ ಮಾಧ್ಯಮವನ್ನು ತಡೆಯುವುದು ಒಳ್ಳೆಯದಲ್ಲ.

ಸಾಂವಿಧಾನಿಕ ಸಂಸ್ಥೆಗಳು ಈ ಬಗ್ಗೆ ದೂರು ನೀಡುವುದಕ್ಕಿಂತ ಉತ್ತಮ ಕಾರ್ಯದಲ್ಲಿ ತೊಡಗಬೇಕು ಎಂದು ನ್ಯಾಯಪೀಠ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *