ಹೈದರಾಬಾದ್: ತೆಲಂಗಾಣ ಸರ್ಕಾರವು ದೇಶದಲ್ಲಿ ಇದೇ ಮೊದಲ ಬಾರಿಗೆ ಎಸ್‌ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಎಸ್‌ಸಿ ಒಳ ಮೀಸಲಾತಿ ಜಾರಿ ಮಾಡಿದ ಮೊದಲ ರಾಜ್ಯ ಎನಿಸಿಕೊಂಡಿದೆ.
ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಆದೇಶ ಹೊರಡಿಸಿದೆ.
ತೆಲಂಗಾಣದಲ್ಲಿ ಎಸ್‌ಸಿ ಪಟ್ಟಿಯಲ್ಲಿ 59 ಉಪಜಾತಿಗಳಿದ್ದು, ಹಿಂದುಳಿದಿರುವಿಕೆ, ಜನಸಂಖ್ಯೆ ಆಧಾರದಲ್ಲಿ ಅವನ್ನು ಮೂರು ಗುಂಪುಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.
ಇದನ್ನೂ ಓದಿ: ಬೆಂಗಳೂರು| ಮೆಟ್ರೋ ರೈಲಿನಲ್ಲಿ ಸಂಚರಿಸುವಾಗ ಪ್ರಯಾಣಿಕರ ಒದ್ದಾಟ
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರೇವಂತ್ ರೆಡ್ಡಿ, ಭಾರತದಲ್ಲಿ ಎಸ್‌ಸಿ ಒಳಮೀಸಲಾತಿ ಕ್ರಾಂತಿಕಾರಿ ನಿರ್ಧಾರವನ್ನು ಜಾರಿಗೆ ತಂದ ಮೊದಲ ರಾಜ್ಯ ತೆಲಂಗಾಣವಾಗಿದೆ.
ಇತಿಹಾಸ ನಿರ್ಮಿಸಿದ್ದಕ್ಕೆ ನಾವೆಲ್ಲರೂ ಹೆಮ್ಮೆಪಡುತ್ತೇವೆ. ಭಾರತ ರತ್ನ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅತ್ಯಂತ ಶುಭ ದಿನದಂದು, ತೆಲಂಗಾಣ ರಾಜ್ಯ ಸರ್ಕಾರವು ಎಸ್‌ಸಿ ಉಪ-ಜಾತಿಗಳ ವರ್ಗೀಕರಣದ ಬಹುದಿನಗಳ ಬೇಡಿಕೆಯನ್ನು ಪರಿಹರಿಸುವ ಸಾಮಾಜಿಕ ನ್ಯಾಯದ ಒಂದು ಮಹಾನ್ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಅತ್ಯುತ್ತಮ ಗೌರವ ಸಲ್ಲಿಸಿದೆ ಎಂದು ಬರೆದಿದ್ದಾರೆ.
ಇದನ್ನೂ ನೋಡಿ: ವಚನಾನುಭವ – 26 |ಅಂಬಿಗರ ಚೌಡಯ್ಯನ ವಚನ ; ಹರಿ ಹರಿಯೆಂದು ಹೊಡವಡುವಿರಿ. ನಿಮ್ಮ ನಡೆಯಲ್ಲಾ ಅನಾಚಾರ Janashakthi Media