ಎಸ್‌ಸಿ-ಎಸ್‌ಟಿ ವಿಭಾಗದ ಅನುದಾನ ಸಮರ್ಪಕ ಬಳಕೆಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಎಸ್‍ಸಿಪಿ ಹಾಗೂ ಟಿಎಸ್‍ಸಿ ಅನುದಾನವನ್ನು ಬೇರೆಡೆಗೆ ಹಸ್ತಾಂತರಿಸುವುದಿಲ್ಲ. ಒಂದು ರೂಪಾಯಿ ಕೂಡ ಬೇರೆ ಇಲಾಖೆಗೆ ವರ್ಗಾವಣೆಯಾಗಲು ಬಿಡುವುದಿಲ್ಲ. ಅಗತ್ಯವಿದ್ದರೆ ಹೆಚ್ಚಿನ ಹಣವನ್ನು ನೀಡಲು ಸಿದ್ದವಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯನ್ನು ನಡೆಸಿದ ಮುಖ್ಯಮಂತ್ರಿಗಳು ಎಸ್ಸಿ-ಎಸ್ಟಿ ಕಲ್ಯಾಣಕ್ಕಾಗಿ ಸರಕಾರದ ನಿರ್ಧಾರಗಳನ್ನು ಮಾಧ್ಯಮಗಳಿಗೆ ತಿಳಿಸಿದರು.

ಇದನ್ನು ಓದಿ: ಟ್ಯಾಪಿಂಗ್‌ ಪ್ರಕರಣ : ತಪ್ಪು ನಂಬರ್‌ನಿಂದ ನಾಯಕತ್ವ ಬದಲಾವಣೆಯ ಗುಟ್ಟು ರಟ್ಟಾಯ್ತು!?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗದವರ ಕಲ್ಯಾಣಕ್ಕಾಗಿ ಮಾತ್ರ ಮೀಸಲಿಟ್ಟಿರುವ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲಾಗುತ್ತದೆ ಎಂಬ ಮೇಲ್ನೋಟದ ವರದಿಗಳ ಬಗ್ಗೆ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು ಈಗ ಇರುವ ಅನುದಾನವನ್ನು ಎಲ್ಲಿಯೂ ಬಳಕೆಯೂ ಮಾಡಿಲ್ಲ. ಖರ್ಚನ್ನು ಮಾಡುವುದಿಲ್ಲ. ಯಾವುದಕ್ಕೆ ಮೀಸಲಿವೆಯೋ ಅವುಗಳಿಗಾಗಿ ಮಾತ್ರವೇ ಖರ್ಚು ಮಾಡಬೇಕೆಂದು ತಾಕೀತು ನೀಡಿದರು.

ಎಸ್‌ಸಿ-ಎಸ್‌ಟಿ ಕಲ್ಯಾಣ ಅಭಿವೃದ್ಧಿಗೆ ಸರಕಾರ ಸಂಪೂರ್ಣವಾಗಿ ಕೆಲಸ ಮಾಡುತ್ತಿದೆ. ಯೋಜನೆಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆಗಳಿಗೆ ರಾಜ್ಯ ಸರಕಾರವು ಅನುಮೋದನೆ ನೀಡಿದೆ. ಆರ್ಥಿಕ, ಶಿಕ್ಷಣ, ಆರೋಗ್ಯ ಹಾಗೂ ಇತರೆ ಕ್ಷೇತ್ರಗಳ ಅಭಿವೃದ್ಧಿಯ ಯೋಜನೆಗಳ ಬಗ್ಗೆಯೂ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ಸಮುದಾಯದ ಸರ್ವೋತ್ತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಅನುದಾನವನ್ನು ಲೋಪವಾಗದಂತೆ ಕ್ರಮವಹಿಸಬೇಕೆಂದು ಮುಖ್ಯಮಂತ್ರಿಗಳು ಹೇಲಿದ್ದಾರೆ.

ಸರಕಾರ ಜಾರಿಗೊಳಿಸುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಎಸ್‍ಸಿಪಿ, ಟಿಎಸ್‍ಸಿ ಯೋಜನೆಯಡಿ ಮೀಸಲಿಟ್ಟ ಹಣವನ್ನು ಒಂದು ವೇಳೆ ದುರ್ಬಳಕೆಯಾದರೆ ಅಂಥವರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು. ಯಾವುದೇ ರೀತಿಯಲ್ಲೂ ಪ್ರಮಾದಗಳನ್ನು ಎಸಗದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಇದನ್ನು ಓದಿ: ಬಳ್ಳಾರಿ ಗಣಿಗಾರಿಕೆ: ಪರಿಸರ ವಿನಾಶ-ಅದರ ಪುನಶ್ಚೇತನ

ಸರಕಾರವು ಎಸ್‍ಸಿಪಿ-ಟಿಎಸ್‍ಸಿ ಯೋಜನೆಗೆ 26,005 ಕೋಟಿ ಅನುದಾನ ಒದಗಿಸಿದೆ. ವಿವಿಧ ಕಾರ್ಯಕ್ರಮಗಳನ್ನು ಸಹ ರೂಪಿಸಲು ಬೇಕಾದಂತೆ ಇಲಾಖಾವಾರು ಕೈಗೊಳ್ಳಬೇಕು. ಅದಕ್ಕಾಗಿ, ಕಾರ್ಯಕ್ರಮಗಳ ಕ್ರಿಯಾ ಯೋಜನೆ ರೂಪಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಶ್ರೀರಾಮುಲು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *