ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿ ಆಗಿ ಕಾರ್ಯನಿರ್ವಹಿಸುತ್ತಿರುವ ಸೌಮ್ಯ ರನ್ನು ಬಂಧಿಸಲಾಗಿದೆ.
ಪ್ರಾಧ್ಯಾಪಕರ ಪರೀಕ್ಷೆ ಪೇಪರ್ ಸೋರಿಕೆ ಆಗಿದ್ದ ಪ್ರಕರಣ ಇದಾಗಿದೆ. ಆರೋಪಿ ಸೌಮ್ಯರನ್ನು ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ಮೈಸೂರಿನಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದಾರೆ. ನಿನ್ನೆ(ಏಪ್ರಿಲ್ 24) ಸರ್ಕಾರಿ ರಜೆ ಹಿನ್ನೆಲೆ ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು.
ಇಂದು ಮತ್ತೆ ವಶಕ್ಕೆ ಪಡೆಯಲಿರುವ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ 32ನೇ ಎಸಿಎಂಎಂ ಕೋರ್ಟ್ಗೆ ಮನವಿ ಮಾಡಲಿದ್ದಾರೆ.
ಸೌಮ್ಯ ಮೊಬೈಲ್‍ನಲ್ಲಿ 18 ಪ್ರಶ್ನೆಗಳು ಇದ್ದವು. ಜಿಲ್ಲಾ ಖಜಾನೆಯಿಂದಲೇ ಪೇಪರ್ ಲೀಕ್ ಶಂಕೆ ವ್ಯಕ್ತವಾಗಿದೆ. ಬಂಡಲ್ ಓಪನ್ ಮಾಡಿ ಪ್ರಶ್ನೆಪತ್ರಿಕೆ ಪಡೆದಿರೋ ಅನುಮಾನ ಎದ್ದಿದೆ. ಬಂಧಿತ ಸೌಮ್ಯಳಿಂದ ಇನ್ನಿತರರಿಗೂ ರವಾನೆಯಾಗಿರುವ ಅನುಮಾನ ಇದೆ.
ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ ಪದವಿ ಪಡೆದುಕೊಂಡರುವ ಸೌಮ್ಯ, ಪ್ರೊಫೆಸರ್ ಹೆಚ್.ನಾಗರಾಜ್ ಎಂಬುವರ ಬಳಿ ಪಿಹೆಚ್ಡಿ ಮುಗಿಸಿದ್ದಾರೆ. ಜಿಐಎಸ್ ಅಂಡ್ ಅಗ್ರಿಕಲ್ಚರ್ ಜಿಯಾಗ್ರಫಿಯಲ್ಲಿ ಪಿಹೆಚ್ಡಿ ಮಾಡಿದ್ದಾರೆ. ಸದ್ಯ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿದ್ದಾರೆ.
ಕಳೆದ ಮಾರ್ಚ್ನಲ್ಲಿ ನಡೆದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪರೀಕ್ಷೆಯನ್ನು ಮೈಸೂರಿನ ಕುವೆಂಪು ನಗರದ ಪಿಯುಸಿ ಕಾಲೇಜು ಸೆಂಟರ್ನಲ್ಲಿ ಬರೆದಿದ್ದರು. ಪರೀಕ್ಷೆ ಆರಂಭದ 1 ಗಂಟೆ ಮುಂಚಿತವಾಗಿ ಗೆಳತಿ ಒಬ್ಬಳಿಗೆ 18 ಪ್ರಶ್ನೋತ್ತರಗಳ ಮಾಹಿತಿಯನ್ನು ವಾಟ್ಸಾಪ್ನಲ್ಲಿ ಕಳಿಸಿದ್ದರು. ಆಕೆಯಿಂದ ಬೆಂಗಳೂರಿನ ರಾಮಕೃಷ್ಣ ಎಂಬುವರಿಗೆ ಮಾಹಿತಿ ಶೇರ್ ಆಗಿತ್ತು. ಸೌಮ್ಯಾಗೆ ಪ್ರಶ್ನೆಗಳು ಸಿಕ್ಕ ಬಗ್ಗೆ ಪೊಲೀಸರು ತನಿಖೆ ಕೈಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿ ಒಂದೊಂದೇ ಹಗರಣಗಳು ಬಯಲಾಗುತ್ತಿವೆ. ಇದರ ನಡುವೆ 30 ರಿಂದ 40 ಲಕ್ಷ ಕೊಟ್ಟರೆ ಸಾಕು ನಿಮಗೆ ಸರ್ಕಾರಿ ಹುದ್ದೆ ಸಿಗುತ್ತೆ ಎಂಬುದು ಬಯಲಾಗುತ್ತಿವೆ. ಇಲ್ಲಿ ಭ್ರಷ್ಟಾಚಾರದ ಅಕ್ರಮ ಹೆಚ್ಚಾಗುತ್ತಿವೆ.