ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಹುದ್ದೆಗಳ ಭರ್ತಿಗೆ ಇದ್ದ ಎಲ್ಲ ತೊಡಕುಗಳು ನಿವಾರಣೆ ಆಗಿವೆ. ಎಲ್ಲ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ವೇಳಾಪಟ್ಟಿ ಪ್ರಕಟಿಸಲು ಸೂಚನೆ ನೀಡಲಾಗಿದೆ ಎಂದರು.
ಇದನ್ನೂ ಓದಿ: ಬೆಂಗಳೂರು| ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಬಂದ ಅವರು, ಮೂರನೇ ಮಹಡಿಯ ಕೊಠಡಿಯನ್ನು ಧಾರ್ಮಿಕ ವಿಧಿಗಳ ಮೂಲಕ ಪ್ರವೇಶಿಸಿದರು. ಬಳಿಕ, ಸಂಪುಟ ಸಭೆ ನಡೆಯುವ ಸಭಾಂಗಣದಲ್ಲಿ ಸುಮಾರು ಎರಡುಗಂಟೆ ತಮ್ಮ ಚೊಚ್ಚಲ ಸಂಪುಟ ಸಭೆ ನಡೆಸಿದರು.
ಇದನ್ನೂ ನೋಡಿ: ರಾಮಜನ್ಮಭೂಮಿ ತೀರ್ಪಿನಿಂದ ಎಸ್ ಐಆರ್ ತೀರ್ಪಿನವರೆಗೆ.. ನ್ಯಾಯಾಂಗದ ವಿಶ್ವಾಸಾರ್ಹತೆ ಏನು? ಎಂತ? Janashakthi Media
