ಗ್ಯಾರಂಟಿ ಯೋಜನೆಗಳಿಂದ ಅವಕಾಶ ವಂಚಿತರಿಗೆ ನ್ಯಾಯ ಸಿಕ್ಕಂತಾಗಿದೆ | ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದ್ದು, ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗ್ಯಾರಂಟಿ 

ನಗರದಲ್ಲಿ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿದ್ದಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠ ಮೈಸೂರು ಇವರ ವತಿಯಿಂದ ಗುರುಪೀಠದ ಬಳಿ ಆಯೋಜಿಸಿರುವ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಇದನ್ನೂ ಓದಿ:ಸರ್ಕಾರ ರೈತರ, ನಾಡಿನ ಜನತೆಯ ಕೈ ಹಿಡಿಯಲಿದೆ| ಸಿಎಂ ಸಿದ್ದರಾಮಯ್ಯ ಭರವಸೆ

ಹಿಂದುಳಿದ, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು, ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ. ರಾಜ್ಯದ ತಲಾವಾರು ಆದಾಯ ಹೆಚ್ಚಾಗಿದೆ. ಪ್ರತಿ ಅರ್ಹ ಫಲಾನುಭವಿ ಕುಟುಂಬಕ್ಕೆ ವಾರ್ಷಿಕವಾಗಿ 50 ರಿಂದ 60 ಸಾವಿರ ಸರ್ಕಾರ ಒದಗಿಸುತ್ತಿದ್ದು, ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಎಂದು ವಿವರಿಸಿದರು.

ಆರೋಪಗಳು ಸತ್ಯವಲ್ಲ:

ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತದೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ ಎಂದರು.

ಇದನ್ನೂ ಓದಿ:ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ| ಸಿಎಂ ಸಿದ್ದರಾಮಯ್ಯ

ಜಾತ್ಯತೀತ ರಾಜಕೀಯ:

ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್ ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯಾತೀತ ರಾಜಕೀಯ ನೀತಿಯನ್ನು ಪಾಲಿಸುವುದಾಗಿ ತಿಳಿಸಿದರು.

ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯಾತೀತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳ ಪರವಾಗಿ ನಿಲ್ಲುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಡಿಯೋ ನೋಡಿ:ಸಂವಿಧಾನ ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ – ಪಿ.ಸಾಯಿನಾಥ್ Janashakthi Media

Donate Janashakthi Media

Leave a Reply

Your email address will not be published. Required fields are marked *