ಎಂಟು ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ – ಸಚಿವ ಜಮೀರ್ ಅಹಮದ್ ಖಾನ್

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ :- ಫೆ.15 ರಂದು ಪ್ಯಾರ ಮಿಲಿಟರಿ ಕಟ್ಟಡ ಉದ್ಘಾಟನೆ: ಶಾಸಕ ಹೆಚ್.ಪಿ. ಸ್ವರೂಪ್

 

ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯ ದವರೆಗೆ ಹಾಸ್ಟೆಲ್ ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್ ನಲ್ಲಿ ಪ್ರವೇಶ ಸಿಗದ 5753 ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ. ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ. ಮಾಡಲಾಗಿದೆ. ಇನ್ನು 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು ಅದು ಸರಿ ಹೋದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದ್ದು, ಶೇ. 100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದಂತಾಗಲಿದೆ ಎಂದು ವಿವರಿಸಿದ್ದಾರೆ.

ನಿರ್ದೇಶನಾಲಯಕ್ಕೆ ಪ್ರಸಕ್ತ ವರ್ಷ 2292 ಕೋಟಿ ರೂ. ನಿಗದಿಯಾಗಿ 1941 ಕೋಟಿ ರೂ. ಬಿಡುಗಡೆಯಗಿದ್ದು ಅದರಲ್ಲಿ 1608 ಕೋಟಿ ರೂ. ವೆಚ್ಚ ಮಾಡಲಾಗಿದ್ದು ಶೇ. 83 ರಷ್ಟು ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 7500 ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ವಿದೇಶಿ ವಿದ್ಯಾಭ್ಯಾಸ ನೆರವು ಯೋಜನೆಯಡಿಯಲ್ಲಿ 92.50 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ರೀತಿ ವಖ್ಫ್ ಬೋರ್ಡ್ ಗೆ 157 ಕೋಟಿ ರೂ. ಅನುದಾನ ಬಿಡುಗಡೆ ಯಾಗಿದ್ದು 125 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *