ರಾಯಚೂರು: ಬಾಲಕರ ವಸತಿ ನಿಲಯದ ಮೇಲ್ಚಾವಣಿಯ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಪೆಟ್ಟುಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಶಾಲೆ
ರಾಯಚೂರು ತಾಲ್ಲೂಕಿನ ಉಡಮಗಲ್ ಖಾನಾಪುರ ಗ್ರಾಮದ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಮೇಲ್ಚಾವಣಿಯ ಸಿಮೆಂಟ್ ಪದರು ಕಳಚಿ ಬಿದ್ದು ಶುಕ್ರವಾರ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
8ನೇ ತರಗತಿಯ ವಿದ್ಯಾರ್ಥಿಗಳಾದ ಗುರುವೇಶ ಜುಲಮಗೇರಾ, ಕಾರ್ತಿಕ ವಡ್ಲೂರು ಹಾಗೂ ಕಿರಣ್ ವಡ್ಲೂರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ : ಮಕ್ಕಳ ತಟ್ಟೆಗೆ ಹಾಕಿದ ಮೊಟ್ಟೆ ವಾಪಸ್ ಪಡೆಯುತ್ತಿದ್ದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ!
ವಿದ್ಯಾರ್ಥಿ ಕಾರ್ತಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಿ ಕಳುಹಿಸಲಾಗಿದೆ, ಗುರುವೇಶ ಮತ್ತು ಕಿರಣ್ ಇವರ ತಲೆಗೆ ಪೆಟ್ಟಾಗಿದ್ದು ಚಿಕಿತ್ಸೆ ನೀಡಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ 6 ಗಂಟೆಗೆ 16 ಜನ ವಿದ್ಯಾರ್ಥಿಗಳು ಇರುವ ಕೊಠಡಿಯಲ್ಲಿ ಓದುತ್ತ ಕುಳಿತಿದ್ದಾಗ ಸಿಮೆಂಟ್ ಕಳಚಿ ಬಿದ್ದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಕುರಿತು ವಸತಿ ನಿಲಯದ ವಾರ್ಡನ್ ಆಂಜನೇಯ ಹೇಮರೆಡ್ಡಿ ಮಾತನಾಡಿ, ನಿನ್ನೆ ಸಂಜೆ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಮಳೆಯಿಂದ ಏಕಾಏಕಿ ಮೇಲ್ಪಾವಣಿಯ ಪ್ಲಾಸ್ಟರ್ ತುಕಡಿಗಳು ವಿದ್ಯಾರ್ಥಿಗಳ ಕೈಗಳ ಮೇಲೆ ಬಿದ್ದು ಪೆಟ್ಟಾಗಿ ರಕ್ತ ಬರುತ್ತಿತ್ತು. ಮುಂದೆ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಇದನ್ನು ನೋಡಿ : ಚೇಳೂರು : ಹಾಸ್ಟೆಲ್ ಸಂಖ್ಯೆ ಹೆಚ್ಚಿಸಿ – ವಿದ್ಯಾರ್ಥಿಗಳಿಂದ ಪತ್ರ ಚಳುವಳಿJanashakthi Media