ಚೆನ್ನೈ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವಾರೂರ್, ನಾಗಪಟ್ಟಿಣಂ, ತಂಜಾವೂರು, ವಿಲ್ಲುಪುರಂ ಮತ್ತು ಅರಿಯಲೂರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಸಾಕಷ್ಟು ಹಾನಿಯುಂಟಾಗುತ್ತಿದೆ. ಚೆನ್ನೈ, ತಿರುವಳ್ಳೂರು, ಕಲ್ಲಕುರಿಚಿ, ಸೇಲಂ, ವೆಲ್ಲೂರು, ತಿರುಪತ್ತೂರು, ರಾಣಿಪೇಟ್, ತಿರುವಣ್ಣಾಮಲೈ ಮತ್ತು ಪುದುಚೇರಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಭಾರೀ ಮಳೆಯಿಂದಾಗಿ, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮಳೆಗಾಲದಲ್ಲಿನ ಮುಂಗಾರಿನ ಪರಿಣಾಮದಿಂದ ಜನ ಇನ್ನೂ ಚೇತರಿಸಿಕೊಳ್ಳಲಾಗಿಲ್ಲ. ಇನ್ನೇನು ಮಳೆಗಾಲ ಮುಗಿತು ಅನ್ನೋ ಹೊತ್ತಿಗೆ ಮತ್ತೆ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಅಪಾರ ಹಾನಿಯನ್ನುಂಟಾಗಿದೆ.
ರಾಣಿಪ್ಪೆಟ್ಟೈ ತಿರುವಣ್ಣಾಮಲೈ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್‌ಪಟ್ಟು, ವಿಲ್ಲುಪುರಂ, ಕಲ್ಲಕ್ಕುರಿಚಿ, ಕಡಲೂರು, ಅರಿಯಲೂರ್, ಪೆರಂಬಲೂರ್, ತಂಜಾವೂರು, ಮೈಲಾಡು, ತಿರುವರುರೈ, ತಿರುವರುರೈ, ರಾಣಿಪ್ಪೆಟ್ಟೈ ತಿರುವಣ್ಣಾಮಲೈನಲ್ಲಿ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ತೀವ್ರ ಮಳೆಯಾಗಲಿದೆ ಎಂದು ಭಾರತೀಯ ಮಾಪನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.