ಎಸ್‌ಸಿಎಸ್‌ಪಿ – ಟಿಎಸ್‌ಪಿ ಅನುದಾನ ಹಣ ದುರ್ಬಳಕೆಯಾಗಿಲ್ಲ: ಎಚ್.ಸಿ.ಮಹಾದೇವಪ್ಪ

ಬೆಳಗಾವಿ: ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಬಳಕೆ ಮಾಡಿದ್ದು, ಹಣ ದುರ್ಬಳಕೆಯಾಗಿಲ್ಲ ಎಂದು ಡಿಸೆಂಬರ್‌ 12ರಂದು ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಬಿಜೆಪಿ ಸದಸ್ಯೆ ಹೇಮಲತಾ ನಾಯಕ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಸದನಕ್ಕೆ ಸ್ಪಷ್ಟನೆ ಕೊಟ್ಟರು. ಹಣ

ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಕಾಯ್ದೆಯ ಸೆಕ್ಷನ್ 7(ಸಿ) ರಡಿ ಸಾಮಾನ್ಯ ಸಾಮಾಜಿಕ ವಲಯದ ಕಾರ್ಯಕ್ರಮಗಳ ಫಲಾನುಭವಿಗಳ ಜನಸಂಖ್ಯೆಯ ಪ್ರಮಾಣಕ್ಕನುಗುಣವಾಗಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅಡಿಯಲ್ಲಿ ಅನುದಾನವನ್ನು ಹಂಚಿಕೆ ಮಾಡಿ ಉಪಯೋಗಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: ಲಾತೂರ್‌ | ಕೇಂದ್ರದ ಮಾಜಿ ಗೃಹ ಸಚಿವ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ

ಅದರಂತೆ, ಗ್ಯಾರಂಟಿ ಯೋಜನೆಗಳಿಗೆ ಈ ಕಾಯ್ದೆಯ ಅಡಿಯಲ್ಲಿ ಅನುದಾನ ಹಂಚಿಕೆ ಮಾಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳಿಗೆ ಉಪಯೋಗಿಸಲಾಗುತ್ತಿದೆ ಎಂದರು.

ಪ್ರಾರಂಭದಿಂದಲೂ ಈ ಕಾಯ್ದೆಯ ಸೆಕ್ಷನ್ 7(ಸಿ) ಪ್ರಕಾರ ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ನೀರಾವರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಯೋಜನಾ ಇಲಾಖೆ, ಇಂಧನ ಇತ್ಯಾದಿ ಇಲಾಖೆಗಳಲ್ಲಿ ಎಲ್ಲರಿಗೂ ಅನ್ವಯವಾಗುವ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳ ಸಮಗ್ರ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅಡಿಯಲ್ಲಿ ಅನುದಾನವನ್ನು ಹಂಚಿಕೆ ಮಾಡಿ ಉಪಯೋಗಿಸಲಾಗುತ್ತಿದೆ ಎಂದು ಎಚ್.ಸಿ.ಮಹಾದೇವಪ್ಪ ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: Karnataka Legislative Assembly Day 05 Live | 16ನೇ ವಿಧಾನಸಭೆಯ 8ನೇ ಅಧಿವೇಶನದ ನೇರಪ್ರಸಾರ

Donate Janashakthi Media

Leave a Reply

Your email address will not be published. Required fields are marked *