ಮಂಡ್ಯ: ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್ (ಎ-9) ರನ್ನು ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳನ್ನು ತಿದ್ದಿ ಮತ್ತು ಸೃಷ್ಟಿಸಿ, ಅಕ್ರಮವಾಗಿ ಸರ್ಕಾರಿ ಭೂಮಿ ಮಂಜೂರಾತಿ ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಜನವರಿ 18ರಂದು ಬಂಧಿಸಿದ್ದಾರೆ. ಅಕ್ರಮ
ತನಿಖಾಧಿಕಾರಿ ಡಿವೈಎಸ್ಪಿ ಚಲುವರಾಜು ನೇತೃತ್ವದ ತಂಡ ವಿಜಯಕುಮಾರ್ ಅವರನ್ನು ಚಾಮರಾಜನಗರ ಬಳಿ ಬಂಧಿಸಿದೆ.
ನಾಗಮಂಗಲದ ಜೆಎಂಎಫ್ಸಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣದಲ್ಲಿ ಈಗಾಗಲೇ ಇಬ್ಬರು ಶಿರಸ್ತೇದಾರರು ಸೇರಿ ಒಟ್ಟು 5 ಸರ್ಕಾರಿ ನೌಕರರನ್ನು ಬಂಧಿಸಲಾಗಿತ್ತು. ಈಗ ಬಂಧಿತರ ಸಂಖ್ಯೆ 6ಕ್ಕೇ ಏರಿದೆ. ತಲೆಮರೆಸಿಕೊಂಡಿರುವ ಉಳಿದ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಹೆಚ್ಚಿನ ಮಾಹಿತಿ ಕಲೆ ಹಾಕಲು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲು ಜ.19ರಂದು ನ್ಯಾಯಾಧೀಶರನ್ನು ಕೇಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ನೋಡಿ: ಲಾಲ್ಬಾಗ್ ಫ್ಲವರ್ ಶೋ| ಬಣ್ಣಬಣ್ಣದ ಹೂಗಳ ಚಿತ್ತಾರದಲ್ಲಿ ‘ತೇಜಸ್ವಿ ವಿಸ್ಮಯ’ Janashakthi Media
