ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ಶೇ 81. 15ರಷ್ಟು ಫಲಿತಾಂಶ ಬಂದಿದೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ 97ರಷ್ಟು ಫಲಿತಾಂಶ ಬಂದಿದ್ದು ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ.

ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಕೊಡಗು 5ನೇ ಸ್ಥಾನದಲ್ಲಿದೆ.  ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

ವಿಜ್ಞಾನ ವಿಭಾಗದಲ್ಲಿ ಶೇ 89.96%, ಕಲಾ ವಿಭಾಗದಲ್ಲಿ 68.36%, ವಾಣಿಜ್ಯ ವಿಭಾಗದಲ್ಲಿ ಶೇ 80.94% ಫಲಿತಾಂಶ ಬಂದಿದೆ.

ಇದನ್ನೂ ಓದಿ: ಕರ್ನಾಟಕ ರಾಷ್ಟ್ರೀಯ ಅಂತರರಾಷ್ಟ್ರೀಯ ಇತರೆ ವಿದ್ಯಮಾನ ಬೆಂಗಳೂರು : ₹ 30.92 ಕೋಟಿ ಮೌಲ್ಯದ ನಕಲಿ ನೋಟು ವಶ, 5 ಮಂದಿ ಬಂಧನ

ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 5,52,690 ಮಂದಿ ತೇರ್ಗಡೆಯಾಗಿದ್ದಾರೆ 1,28448 ಕಲಾ 1,74,315 ವಾಣಿಜ್ಯ 2,49,927 ವಿಜ್ಞಾನ ವಿದ್ಯಾರ್ಥಿಳು ಪಾಸಾಗಿದ್ದಾರೆ.

ರಾಜ್ಯಕ್ಕೆ 598 ಅಂಕ ಪಡೆದು ವಿದ್ಯಾಲಕ್ಷ್ಮಿ ಪ್ರಥಮಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್​ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.

 

ದ್ವಿತೀಯ ಪಿಯುಸಿ ಪರೀಕ್ಷೆ  ಫಲಿತಾಂಶ ಚೆಕ್‌ ಮಾಡುವುದು ಹೇಗೆ?

  • ವಿದ್ಯಾರ್ಥಿಗಳು ವೆಬ್‌ಸೈಟ್‌ ಲಿಂಕ್ http://www.karresults.nic.in/# ಗೆ ಭೇಟಿ ನೀಡಿ.
  • ತೆರೆದ ವೆಬ್‌ಪೇಜ್‌ನಲ್ಲಿ ‘2nd PUC Main Examination Results’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
  • ಮತ್ತೊಂದು ವೆಬ್‌ಪೇಜ್‌ ತೆರೆಯುತ್ತದೆ.
  • ಇಲ್ಲಿ ದ್ವಿತೀಯ ಪಿಯುಸಿ ರಿಜಿಸ್ಟರ್‌ ನಂಬರ್ ಕೇಳಲಾಗುತ್ತದೆ.
  • ರಿಜಿಸ್ಟರ್ ನಂಬರ್ ಟೈಪಿಸಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
  • ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

 ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದ ಹೈಲೈಟ್ಸ್‌ಗಳು

  • 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶೇಕಡ.81.15 ಬಂದಿದೆ.
  • ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಪಾಸ್.
  • ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸ್‌.
  • ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್.
  • 97 ಶೇಕಡದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ.
  • 96.80 ಶೇಕಡದೊಂದಿಗೆ ಉಡುಪಿ ಜಿಲ್ಲೆಗೆ ಫಲಿತಾಂಶದಲ್ಲಿ ಎರಡನೇ ಸ್ಥಾನ.
  • 94.89 ಶೇಕಡದೊಂದಿಗೆ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ.
  • ಗದಗ ಜಿಲ್ಲೆಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊನೆ ಸ್ಥಾನ.

ಮರು ಮೌಲ್ಯಮಾಪನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಇದಕ್ಕೆ https://kseab.karnataka.gov.in/ ವೆಬ್‌ಸೈಟ್‌ ಮೂಲಕ ಅರ್ಜ ಸಲ್ಲಿಸಬಹುದು. ಮಂಡಲಿ ನಿಗದಿತ ಶುಲ್ಕವನ್ನು ಪಾವತಿಸಿ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು.

Donate Janashakthi Media

Leave a Reply

Your email address will not be published. Required fields are marked *