ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದೂ, ಮಾರ್ಚ್ 1 ರಿಂದ 20 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು ಎಂದು ಪಿಯು ಬೋರ್ಡ್ ತಿಳಿಸಿದೆ.ಬೆಂಗಳೂರು
ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಫೋನ್ ಅನ್ನು ಮಾತ್ರ ಇಟ್ಟುಕೊಳ್ಳಲು ಮುಖ್ಯ ಅಧೀಕ್ಷಕರಿಗೆ ಅವಕಾಶವಿದೆ. ಆದರೆ, ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬೆಂಗಳೂರು
ಇದನ್ನೂ ಓದಿ: ಪುಣೆ| ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ
ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು
1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
6) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
7) ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ. ಯಾವ ಕೇಂದ್ರದಲ್ಲಿ ಇಲ್ಲವೋ ಮಾಹಿತಿ ನೀಡಿ ಈಗಲೇ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಈ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು.
ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ನೋಡಿ: ಫೆಬ್ರವರಿ 28| ರಾಷ್ಟ್ರೀಯ ವಿಜ್ಞಾನ ದಿನಾಚರಣೆ |ಸರ್ ಸಿ.ವಿ.ರಾಮನ್Janashakthi Media