ಪತಿ ಮತ್ತು ಅವರ ಕುಟುಂಬದ ವಿರುದ್ಧ ಸೆಕ್ಷನ್ 498(A) ಸಾಧನವಾಗಿ ಬಳಸಬಾರದು: ಸುಪ್ರೀಂ ಕೋರ್ಟ್

ನವದೆಹಲಿ: ಹೊಸದಿಗಂತ ಡಿಜಿಟಲ್ ಡೆಸ್ಕ್ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 498A ಕೌಟುಂಬಿಕ ದೌರ್ಜನ ಮತ್ತು ಕಿರುಕುಳದಿಂದ ಮಹಿಳೆಯರ ರಕ್ಷಣೆ) ವಯಕ್ತಿಕ ದ್ವೇಷ ಸಾಧಿಸಲು ಪತಿ ಮತ್ತು ಅವರ ಕುಟುಂಬದ ವಿರುದ್ಧ ಸೆಕ್ಷನ್ 498(A) ಸಾಧನವಾಗಿ ಬಳಸಬಾರದು ಎಂದು ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ನಿರ್ದಿಷ್ಟವಾಗಿ ಮಹಿಳೆಯರು ತಮ್ಮ ಪತಿ ಮತ್ತು ಅವರ ಕುಟುಂಬದ ವಿರುದ್ಧ ತನ್ನ ಅವಿವೇಕದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಎನ್ ಕೋಟೇಶ್ವರ್ ಸಿಂಗ್ ಅವರ ಪೀಠ  ಹೇಳಿದೆ.

ಇದನ್ನೂ ಓದಿ : ಹೈಕೋರ್ಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟನೆ

ವಿಚ್ಛೇದನಕ್ಕೆ ಪತಿ ಮನವಿ ಸಲ್ಲಿಸಿದ ನಂತರ ಪತ್ನಿ ತನ್ನ ಪತಿ ಮತ್ತು ಅತ್ತೆಯ ವಿರುದ್ಧ ಸೆಕ್ಷನ್ 498 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದರು. ಈ ಪ್ರಕರಣವನ್ನು ರದ್ದುಗೊಳಿಸಲು ತೆಲಂಗಾಣ ಹೈಕೋರ್ಟ್‌
ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪತಿ ಮತ್ತು ಆತನ ಕುಟುಂಬದ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸಲು ಕೆಲ ಮಹಿಳೆಯರು ಈ ನಿಬಂಧನೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿ, ಪ್ರಕರಣವನ್ನು ರದ್ದುಗೊಳಿಸಿದೆ.

ಈ ನಿರ್ದಿಷ್ಟ ಪ್ರಕರಣದಲ್ಲಿ, ಕ್ರೌರ್ಯದ ಆರೋಪ ಹೊತ್ತಿರುವ ವ್ಯಕ್ತಿ ಮತ್ತು ಆತನ ಕುಟುಂಬದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಮತ್ತು ಪ್ರಕರಣವನ್ನು ಮುಂದುವರಿಸಲು ಅನುಮತಿಸುವ ಹೈಕೋರ್ಟ್‌ ವಿರ್ಧಾರವನ್ನು ರದ್ದುಗೊಳಿಸಿದೆ.

ಇದನ್ನೂ ನೋಡಿ : ವಿಎಚ್‌ಪಿ ಕಾರ್ಯಕ್ರಮದಲ್ಲಿ ಜಸ್ಟೀಸ್‌ ಭಾಗಿ | ಜಸ್ಟೀಸ್ ಯಾದವ್ ಮತ್ತು ವಿವಾದಾತ್ಮಕ ಹೇಳಿಕೆಗಳು Janashakthi Media

Donate Janashakthi Media

Leave a Reply

Your email address will not be published. Required fields are marked *