ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಲಷ್ಕರ್ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದನೆ ವಿರೋಧಿ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ (LeT) ಸಂಘಟನೆಯ ಒಬ್ಬ ಉಗ್ರನನ್ನು ಬುಧವಾರ ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 3ರಂದು ದಕ್ಷಿಣ ಕಾಶ್ಮೀರದ ಮಿಮಂದರ್ ಪ್ರದೇಶದ ದಟ್ಟ ತೋಟ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಏಳು ಗ್ರಾಮಗಳನ್ನು ಒಳಗೊಂಡ ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: ಎಚ್‌ಎಂಟಿ ಅರಣ್ಯ ಭೂಮಿ ವಿವಾದ ತೀವ್ರ: ಕುಮಾರಸ್ವಾಮಿ – ಖಂಡ್ರೆ ನಡುವೆ ಆರೋಪ – ಪ್ರತ್ಯಾರೋಪ

ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆಯ 55 ಹಾಗೂ 44 ರಷ್ತ್ರೀಯ ರೈಫಲ್ಸ್ ದಳಗಳು ಮತ್ತು ಸಿಆರ್‌ಪಿಎಫ್ ಪಡೆಗಳು ಸಂಯುಕ್ತವಾಗಿ ಕಳೆದ ಐದು ದಿನಗಳಿಂದ ಪ್ರದೇಶವನ್ನು ಕಟ್ಟುನಿಟ್ಟಾಗಿ ಸುತ್ತುವರೆದಿದ್ದವು. ಈ ಅವಧಿಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮಧ್ಯಂತರ ಗುಂಡಿನ ಚಕಮಕಿ ನಡೆದಿದೆ.

ಈ ಬೆಳವಣಿಗೆಯನ್ನು ದೃಢಪಡಿಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ‘ಓಡಬಹುದು, ಆದರೆ ಅಡಗಲು ಸಾಧ್ಯವಿಲ್ಲ! ಶೋಪಿಯನ್‌ನಲ್ಲಿ ಎಸ್‌ಒಜಿ, ರಷ್ತ್ರೀಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ ಜೊತೆಗಿನ ಸಂಯುಕ್ತ ಕಾರ್ಯಾಚರಣೆಯಲ್ಲಿ ಲಷ್ಕರ್ ಉಗ್ರನನ್ನು ನಿಷ್ಕ್ರಿಯಗೊಳಿಸಲಾಗಿದೆ’ ಎಂದು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಈ ಮೊದಲು ಸಿಲುಕಿಕೊಂಡಿದ್ದ ಉಗ್ರರನ್ನು ಲತೀಫ್ ಮತ್ತು ಜಾಕಿರ್ ಎಂದು ಗುರುತಿಸಲಾಗಿತ್ತು. ಆದರೆ ಹತ್ಯೆಯಾದ ಉಗ್ರನ ಗುರುತು ಇನ್ನಷ್ಟೇ ದೃಢಪಡಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ: 40 ಬೇಡಿಕೆಗಳೊಂದಿಗೆ ಜುಲೈ 10ಕ್ಕೆ ಅಂಗನವಾಡಿ-ಬಿಸಿಯೂಟ ನೌಕರರ ರಾಜ್ಯವ್ಯಾಪಿ ಮುಷ್ಕರ

Donate Janashakthi Media

Leave a Reply

Your email address will not be published. Required fields are marked *