ಪಟ್ನಾ: ‘ಇಂಡಿಯಾ’ ಬಣವು ವಿರೋಧ ಪಕ್ಷಗಳ ಒಕ್ಕೂಟ ಗುರುವಾರ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ. ಪಟ್ನಾ
ಇದನ್ನೂ ಓದಿ : ಪಟಾಕಿ ಸಿಡಿದು ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ ದಾಖಲು
‘ಇಂಡಿಯಾ’ ಬಣವು ಸರ್ಕಾರ ರಚಿಸಿದರೆ ವಿಕಾಸಶೀಲ ಇನ್ಸಾನ್ ಪಕ್ಷದ(ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಉಪಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರೆ. ಅದೇ ರೀತಿ ಹಿಂದುಳಿದ ವರ್ಗಗಳ ಮತ್ತೊಬ್ಬ ನಾಯಕನಿಗೆ ಉಪಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂದು ಹೇಳಿದ್ದಾರೆ.
ಒಕ್ಕೂಟದ ಎಲ್ಲ ಪಕ್ಷಗಳ ಸದಸ್ಯರು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ ಕಾಂಗ್ರೆಸ್‌ನ ಹಿರಿಯ ನಾಯಕ ಅಶೋಕ್ ಗೆಹಲೋತ್, ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು.
ಬಿಹಾರದಲ್ಲಿ ನ.6 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನ.14ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ನೋಡಿ :ಅಂಗನವಾಡಿ ನೌಕರರು ಗ್ರಾಚ್ಯುಟಿ ಪಡೆಯೋದು ಹೇಗೆ ? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ? ವಿಶ್ಲೇಷಣೆ ಎಸ್.ವರಲಕ್ಷ್ಮಿ
