ದ್ವೇಷ ಭಾಷಣ ಮಸೂದೆ ತಡೆಗಟ್ಟಲು ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ: ರಾಜ್ಯಪಾಲರ ವಿರುದ್ಧ ಪರಮೇಶ್ವರ್ ಆರೋಪ

ಬೆಂಗಳೂರು: ದ್ವೇಷ ಭಾಷಣ ಮಸೂದೆಯಲ್ಲಿನ 28 ಅಂಶಗಳನ್ನು ರಾಜ್ಯಪಾಲರು ಪ್ರಶ್ನಿಸಿದ್ದಾರೆ. ಅದನ್ನು ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ. ಮುಂದೆ ಏನಾಗುತ್ತದೆ ನೋಡೋಣ. ರಾಷ್ಟ್ರಪತಿಗಳು ಪರಿಶೀಲಿಸಿ ವಾಪಸ್ ಕೊಟ್ಟರೆ, ಬದಲಾವಣೆ ಮಾಡಿ ಕಳಿಸಲಾಗುವುದು ಎಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದರು.

ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಏನು ಬೇಕಾದರೂ ಮಾತನಾಡಿದರೆ, ಅದರ ಪರಿಣಾಮ‌ ಸಮಾಜಕ್ಕೆ ಆಗುತ್ತದೆ. ಸಮುದಾಯಗಳನ್ನು ದೂಷಣೆ ಮಾಡುವುದು, ವೈಯಕ್ತಿಕವಾಗಿ ಮಾತನಾಡುವುದು. ಆ ಮಾತುಗಳು ಸಮಾಜದ ಮೇಲೆ ಏನು ಪರಿಣಾಮ ಬೀರುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ದ್ವೇಷಭಾಷಣ ಮಸೂದೆ ತಂದಿದ್ದೇವೆ.

ಕೆಲವು ಭಾಗಗಳಲ್ಲಿ, ಕೆಲವರು ಭಾಷಣಗಳನ್ನು ಮಾಡಿದ್ದಾರೆ. ಭಾಷಣ ಮಾಡಿದ ಮೇಲೆ ಏನಾಯಿತು ಎಂಬುದನ್ನು ಗಮನಿಸಿದ್ದೇವೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಬಿಲ್ ತಂದಿದ್ದೇವೆ. ಯಾರು ಏನು ಬೇಕಾದರೂ ಮಾತಾಡಬಹುದೇ? ಸಮಾಜದಲ್ಲಿ ಅಶಾಂತಿ ಉಂಟು‌ ಮಾಡಬಹುದೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ʼಲ್ಯಾಂಡ್‌ ಲಾರ್ಡ್ʼ- ಜಾತಿವಾದ ಮತ್ತು ಊಳಿಗಮಾನ್ಯ ಪದ್ಧತಿ ಎಂಬ ಎರಡು ಶಕ್ತಿ ಸಿದ್ಧಾಂತಗಳ ಹಿಂಸಾಚಾರಕ್ಕೆ ನಲುಗಿದವರ ಕತೆ

ರಾಜ್ಯಪಾಲರು ಉದ್ದೇಶಪೂರ್ವಕವಾಗಿ, ದ್ವೇಷ ಭಾಷಣ ಮಸೂದೆ ನೆನೆಗುದಿಗೆ ಬೀಳಬೇಕು. ಇದು ಜಾರಿಯಾಗಬಾರದು ಎಂಬ ಉದ್ದೇಶದಿಂದ ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯಪಾಲರು ಉದ್ದೇಶಪೂರ್ವಕವಾಗಿ, ರಾಜ್ಯ ಸರ್ಕಾರ ‘ದ್ವೇಷ ಭಾಷಣ ಮಸೂದೆ 2026’ ನೆನೆಗುದಿಗೆ ಬೀಳಬೇಕು. ಇದು ಜಾರಿಯಾಗಬಾರದು ಎಂಬ ಉದ್ದೇಶದಿಂದಲೇ ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ ಎಂದು ಜಿ.ಪರಮೇಶ್ವರ ಅವರು ಅಭಿಪ್ರಾಯ ಹೊರ ಹಾಕಿದರು.

ಉದ್ಯಮಿ ಸಿ.ಜೆ.ರಾಯ್ ಅತ್ಮಹತ್ಯೆ ಪ್ರಕರಣದಲ್ಲಿ ಬೇರೆಬೇರೆ ರೀತಿಯಲ್ಲಿ ಊಹಾಪೋಹಾಗಳು ಆಗಬಾರದು ಎಂಬ ಕಾರಣದಿಂದ ಎಸ್‌ಐಟಿ ರಚನೆ ಮಾಡಿದ್ದೇವೆ. ಎಸ್‌ಐಟಿ ವರದಿ ಏನು ಬರುತ್ತದೆ ಗಮನಿಸೋಣ. ಯಾರ ಪಾತ್ರಗಳು ಏನಿದೆ ಎಂಬುದು ನೋಡಬೇಕಾಗುತ್ತದೆ ಎಂದು ಹೇಳಿದರು.

ಇದನ್ನೂ ನೋಡಿ: ಬಾದಲ್‌ ಸರ್ಕಾರ ನಾಟಕಗಳಲ್ಲಿ ಸಾಮಾಜಿಕ ಬದ್ಧತೆ ಇತ್ತು – ಧು. ಸರಸ್ವತಿ Janashakthi Media

Donate Janashakthi Media

Leave a Reply

Your email address will not be published. Required fields are marked *