ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು.
ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು ಸಂತ್ರಸ್ತೆಯ ತಾಯಿ ಒತ್ತಾಯಿಸಿದ್ದು, ಹೈಕೋರ್ಟ್ ತೀರ್ಪಿನಲ್ಲಿ ನಂಬಿಕೆ ಕಳೆದುಕೊಂಡಿರುವುದಾಗಿ ಆಕ್ರೋಶ ವ್ಯಕ್ತಪಡಿಸಿ ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.
ಸಾಮಾಜಿಕ ಹೋರಾಟಗಾರರಾದ ವಕೀಲೆ ಭಯನಾ ಮತ್ತು ಅಖಿಲ ಭಾರತ ಮಹಿಳಾ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
‘ನಾನು ಇಡೀ ಹೈಕೋರ್ಟ್ ಅನ್ನು ದೂಷಿಸುವುದಿಲ್ಲ. ಆದರೆ ಇಬ್ಬರು ನ್ಯಾಯಮೂರ್ತಿಗಳು ನಮ್ಮ ನಂಬಿಕೆಯನ್ನು ನುಚ್ಚು ನೂರು ಮಾಡಿದ್ದಾರೆ. ಹಿಂದಿನ ನ್ಯಾಯಮೂರ್ತಿ ಅವರು ನಮಗೆ ನ್ಯಾಯ ಒದಗಿಸಿದ್ದರು. ಆದರೆ ಈಗ ಅಪರಾಧಿಗೆ ಜಾಮೀನು ಸಿಕ್ಕಿದೆ’ ಎಂದು ಸಂತ್ರಸ್ತೆಯ ತಾಯಿ ಹೇಳಿದರು.
‘ಅತ್ಯಾಚಾರಿಗಳು ಮತ್ತು ಅಪರಾಧಿಗಳನ್ನು ರಕ್ಷಿಸುವುದನ್ನು ನಿಲ್ಲಿಸಿ’ ಎಂಬ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದರು.
ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್‌ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿ, ಜಾಮೀನು ನೀಡಿದೆ.
ಇದನ್ನೂ ನೋಡಿ : ‘ಮರ್ಯಾದೆಗೇಡು ಹತ್ಯೆ’ ಮರ್ಯಾದೆ ಉಳಿಸಿಕೊಳ್ಳಲಿ ಸರ್ಕಾರ!? ಕೆ.ಎಸ್.ವಿಮಲಾ, ಗುರುರಾಜ ದೇಸಾಯಿ ಮಾತುಕತೆ Janashakthi
