ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆ.ಎ.ಎಸ್. ಅಧಿಕಾರಿ

ಬೆಂಗಳೂರು: ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರಾಗಿ ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಅಪರ ಮುಖ್ಯ ಕಾರ್ಯದರ್ಶಿಗಳು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇದಕ್ಕೆ ಸರ್ಕಾರ ಮುಂದಾಗಿರುವ ಬಗ್ಗೆ ತಿಳಿದು ಬಂದಿತು. ಸಂಸ್ಥೆಗೆ ಹಿರಿಯ ಕೆಎಎಸ್‌ ಅಧಿಕಾರಿಯನ್ನು ನಿರ್ದೇಶಕರನ್ನಾಗಿ ಮಾಡಿ ಮಾನವಶಾಸ್ತ್ರಜ್ಞರನ್ನು ಅವರ ಅಧೀನದಲ್ಲಿ ನೇಮಕಗೊಳಿಸುವ ಬಗ್ಗೆ ಪರಿಶೀಲನೆ ನಡೆಸಿ, ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು.

ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿ, ಕೇರಳ ಮಾದರಿಯಲ್ಲಿ ಆಡಳಿತ ಮತ್ತು ಸಂಶೋಧನಾ ವಿಭಾಗಗಳನ್ನು ಪ್ರತ್ಯೇಕವಾಗಿ ರಚಿಸುವ ಬಗ್ಗೆ ಅಥವಾ ಒಡಿಶಾ ರಾಜ್ಯದ ಮಾದರಿ ಏನು ಎಂದು ಮಾಹಿತಿ ತರಿಸಿ, ಪರಿಶೀಲಿಸುವಂತೆ ಸಿಎಂ ಸೂಚಿಸಿದರು.

ಇದನ್ನೂ ಓದಿ: ಭವಾನಿ ರೇವಣ್ಣಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌

ಆಶ್ರಮ ಶಾಲೆಗಳಲ್ಲಿ ಆಯಾ ಸಮುದಾಯದವರನ್ನೇ ಕೇರ್‌ ಟೇಕರ್‌ ಆಗಿ ನೇಮಕ ಮಾಡಿದರೆ, ಈ ಶಾಲೆಗಳು ಸಮುದಾಯಗಳಿಗೆ ಹತ್ತಿರವಾಗುವ ಸಾಧ್ಯತೆ ಇದೆ ಎಂದು ಬುಡಕಟ್ಟು ಸಂಶೋಧನಾ ಸಂಸ್ಥೆಯ ಸಂಶೋಧನಾ ಅಧಿಕಾರಿ, ಸ್ವತಃ ಇರುಳಿಗ ಬುಡಕಟ್ಟು ಸಮುದಾಯದ  ಡಾ. ಕೆ.ವಿ. ಕೃಷ್ಣಮೂರ್ತಿ ಸಭೆಯಲ್ಲಿ ವಿವರಿಸಿದರು.  ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಿಸುವಂತೆ ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್,  ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ನೋಡಿ: ನಿರಂಜನ 100 ಚಿರಸ್ಮರಣೆ | ಕಯ್ಯೂರು ವೀರರ ಕಥೆJanashakthi Media

Donate Janashakthi Media

Leave a Reply

Your email address will not be published. Required fields are marked *