ರಾಯರೆಡ್ಡಿ, ಬಿ.ಆರ್.ಪಾಟೀಲ್, ದೇಶಪಾಂಡೆಗೆ ‘ಸಂಪುಟ ದರ್ಜೆ ಸ್ಥಾನಮಾನ’

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕರಾದ ಆರ್. ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ ಮತ್ತು ಬಿ ಆರ್ ಪಾಟೀಲ್ ಅವರಿಗೆ ಸರ್ಕಾರದಲ್ಲಿ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.

ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಇನ್ನು ಈ ಮೂವರು ಶಾಸಕರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ಮಾನ ನೀಡಿ ರಾಜ್ಯಪಾಲರ ಆದೇಶನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ-2(ಪ್ರ) ಶುಕ್ರವಾರ ಆದೇಶ ಹೊರಡಿಸಿದ್ದಾರೆ. 

ಇದನ್ನೂ ಓದಿಸ್ಪೀಕರ್ ಆದವರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬುದು ಮೌಡ್ಯ: ಬಸವರಾಜ ರಾಯರೆಡ್ಡಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಸಚಿವ ಸ್ಥಾನ ಗಿಟ್ಟಿಸಿ ಅಧಿಕಾರವನ್ನು ಅನುಭವಿಸಿದ ಕೆಲವು ಹಿರಿಯ ನಾಯಕರಿಗೆ ಈ ಬಾರಿ ಕಾಂಗ್ರೆಸ್‌ ಸರ್ಕಾರದಲ್ಲಿ ಯಾವುದೇ ಅಧಿಕಾರ ಸಿಕ್ಕಿಲ್ಲ. ಎರಡು ಮೂರು ಬಾರಿ ಗೆದ್ದವರಿಗೆಲ್ಲಾ ಸಚಿವ ಸ್ಥಾನ ಕೊಟ್ಟಿರುವಾಗ ತಾವು ಹಿರಿಯರಾಗಿದ್ದು, ಅನುಭವ ಇದ್ದರೂ ಸಚಿವ ಸ್ಥಾನ ಕೊಡದಿದ್ದಕ್ಕೆ ಭಾರಿ ಬೇಸರ ವಯಕ್ತಪಡಿಸಿದ್ದರು. ಜೊತೆಗೆ, ವೇದಿಕೆ ಸಿಕ್ಕಾಗೆಲ್ಲ ಸರ್ಕಾರ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದರು. ಇವರ ಕೋಪವನ್ನು ಶಮನ ಮಾಡಲು ನಿಗಮ ಮಂಡಳಿ ಸ್ಥಾನವನ್ನು ಕೊಡಲು ಮುಂದಾದರೂ ಅದನ್ನು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ನಾಯಕರ ಕೋಪ ಶಮನಕ್ಕಾಗಿ ಸರ್ಕಾರದಿಂದ ಸಂಪುಟ ದರ್ಜೆ ಸ್ಥಾನಮಾನವನ್ನು ಹೊಂದಿರುವ ಹೊಸ ಹುದ್ದೆಯನ್ನು ಸೃಷ್ಟಿಸಿ ಹಂಚಿಕೆ ಮಾಡಲಾಗಿದೆ.

ರಾಜ್ಯದ ಆರ್ಥಿಕತೆ ಹಲವು ಸವಾಲು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿಮುಖ್ಯಮಂತ್ರಿಗಳು ನನ್ನನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡು ಹೊಸ ಹೊಣೆಗಾರಿಕೆ ನೀಡಿದ್ದಾರೆ. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಎಐಸಿಸಿ ನಾಯಕರಿಗೆ ಕೃತಜ್ಞತೆಗಳು ಎಂದು ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಈ ವಿಡಿಯೋ ನೋಡಿಸಂಸದರನ್ನು ಅಮಾನತು ಮಾಡಿ ಕರಾಳ ಶಾಸನಕ್ಕೆ ಅನುಮೋದನೆ: ನವ ವಸಾಹತೀಕರಣದ ಮತ್ತೊಂದು ರೂಪ!? Janashakthi Media

 

Donate Janashakthi Media

Leave a Reply

Your email address will not be published. Required fields are marked *