ಜೆಡಿಎಸ್ ನಾಯಕರಾಗಿ ಹಿರಿಯ ಶಾಸಕ ಸುರೇಶ್ ಬಾಬು ಆಯ್ಕೆ

ಬೆಂಗಳೂರು: ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್‌ ಬಾಬು ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸ್ಪೀಕರ್ ಯು ಟಿ ಖಾದರ್  ಹೇಳಿದ್ದಾರೆ.

ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಜೆಡಿಎಸ್ ಪಕ್ಷದ ನಾಯಕರನ್ನಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ರನ್ನು (ವಿಧಾನಸಭಾ) ನೇಮಕ ಮಾಡಲಾಗಿದ್ದು, ಅದಕ್ಕೆ ಮನ್ನಣೆ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಜುಲೈ 14ರಂದು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಅದರಂತೆ ಸುರೇಶ್ ಬಾಬು ರನ್ನು ಜೆಡಿಎಸ್ ಪಕ್ಷದ ನಾಯಕರನ್ನಾಗಿ ಗುರುತಿಸಲಾಗಿದೆ ಎಂದು ಖಾದರ್ ಸದನಕ್ಕೆ ತಿಳಿಸಿದರು. ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾದ ನಂತರ ಚನ್ನಪಟ್ಟಣ ಕ್ಷೇತ್ರದ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಹುದ್ದೆಗೆ ಹಲವಾರು ಹೆಸರುಗಳು ಕೇಳಿ ಬಂದಿದ್ದವು. ಮಾಜಿ ಸಚಿವ, ಹೊಳೆನರಸೀಪುರದ ಶಾಸಕ ಎಚ್.ಡಿ. ರೇವಣ್ಣ ಹೆಸರು ಮುಂಚೂಣಿಯಲ್ಲಿತ್ತು. ಆದರೆ ರೇವಣ್ಣ ಅವರ ಮೇಲೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಅಪಹರಣದಂತಹ ಗುರುತರ ಆರೋಪ ಇರುವುದರಿಂದ ಅವರ ಹೆಸರನ್ನು ಕೈಬಿಡಲಾಗಿದೆ.

 ಇದನ್ನೂ ನೋಡಿ: LIVE Assembly Session Day 1 Live: 16 ನೇ ವಿಧಾನ ಸಭೆಯ ಮುಂಗಾರು ಅಧಿವೇಶನ ನೇರಪ್ರಸಾರ 

Donate Janashakthi Media

Leave a Reply

Your email address will not be published. Required fields are marked *