ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ನಗರ ಪಾಲಿಕೆಗಳಿಗೆ ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ಸೆಪ್ಟಂಬರ್ 3ರಂದು ಮತದಾನ ನಡೆಯಲಿದೆ. ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು.
ಹುಬ್ಬಳ್ಳಿ-ಧಾರವಾಡದಲ್ಲಿ 82 ವಾರ್ಡ್‌ಗಳು, ಕಲಬುರಗಿಯ 55 ವಾರ್ಡ್‌ಗಳು ಮತ್ತು ಬೆಳಗಾವಿಯ 58 ವಾರ್ಡ್‌ಗಳು. ದೊಡ್ಡಬಳ್ಳಾಪುರ, ತರೀಕೆರೆ ಮತ್ತು ಇತರ ಕೆಲವು ಸ್ಥಳಗಳ ನಗರ ಪಾಲಿಕೆಗಳಿಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವ ಮೂರು ಕ್ಷೇತ್ರಗಳು ಒಳಗೊಂಡಿದೆ.
ಆಗಸ್ಟ್ 16ರಂದು ಚುನಾವಣಾ ಅಧಿಸೂಚನೆಯನ್ನು ಜಿಲ್ಲಾಧಿಕಾರಿಗಳು ಹೊರಡಿಸಲಿದ್ದಾರೆ. ಆಗಸ್ಟ್ 23 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆಗಸ್ಟ್ 24ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಆಗಸ್ಟ್ 26 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ನಂತರ ನಡೆಯುತ್ತಿರುವ ಸ್ಥಳೀಯ ಚುನಾವಣೆ ಇದಾಗಿದೆ. ಉತ್ತರ ಕರ್ನಾಟಕದವರೇ ಆಗಿರುವ ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ ಅವರ ಈ ಚುನಾವಣೆ ಒಂದು ಪ್ರತಿಷ್ಠೆಯೂ ಆಗಿದೆ.