ಧರ್ಮಸ್ಥಳ‌ದಲ್ಲಿ ಸರಣಿ ಸಾವು ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಮೈಸೂರು: ಧರ್ಮಸ್ಥಳ‌ದಲ್ಲಿ ಸರಣಿ ಸಾವುಗಳಾಗಿವೆ ಎಂಬ ಆರೋಪಗಳ ಕುರಿತಾಗಿ ನಡೆಯುತ್ತಿರುವ ಚರ್ಚೆಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಗರದಲ್ಲಿ ಜುಲೈ 18 ಶುಕ್ರವಾರದಂದು ಮಾಧ್ಯಮದವರ ಪ್ರಶ್ನೆಗೆ  ಪ್ರತಿಕ್ರಿಯೆ ನೀಡಿದ್ದಾರೆ.

ಸರ್ಕಾರ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಹಾಗೂ ಈ ಪ್ರಕರಣದಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ನ್ಯಾಯ ಒದಗಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮನವಿ

ಸುಪ್ರೀಂ ಕೊರ್ಟ್‌ ನಿವೃತ್ತ ನ್ಯಾಯಾಧೀಶ  ವಿ ಗೋಪಾಲಗೌಡ ಅವರು ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೋಲಿಸರು ಇಲಾಖೆಯವರು ಹೆಳಿದರೆ ಮಾಡುತ್ತೆವೆ. ಯಾರೇ ಒತ್ತಡ ಹಾಕಿದರು, ಯಾರ ಮಾತುಗಳನ್ನು ನಾವು ಕೆಳುವುದಿಲ್ಲ ಎಲ್ಲವನ್ನು ಕಾನೂನು ಪ್ರಕಾರವೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದರು. ಸಾವು

ಧರ್ಮಸ್ಥಳ ಸೌಜನ್ಯ ಪ್ರಕರಣ-ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶ ವಿ ಗೋಪಾಲಗೌಡ  ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದರು.

ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್‌ಐಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಉತ್ತರಿಸಿದರು.

ಇದನ್ನೂ ನೋಡಿ: ದೇವನಹಳ್ಳಿ | ಅನ್ನ ಕೊಡೋ ರೈತರ ಬಾಯಿಗೆ ಮಣ್ಣು ಹಾಕ್ತೀರಾ ಸಿದ್ರಾಮಯ್ಯನವರೇ.? | ಗ್ರೌಂಡ್‌ ರಿಪೋರ್ಟ್‌Janashakthi

Donate Janashakthi Media

Leave a Reply

Your email address will not be published. Required fields are marked *