ಶ್ರೀನಗರ: ಜಮ್ಮು ಮತ್ತು ಕಾಶ್ಮೀರವದ ಕಥುವಾ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹೆಚ್ಚು ಮನೆಗಳು ಕುಸಿದಿವೆ.,ಬುಧವಾರ ನಾಲ್ಕು ಜನ ಸಾನ್ನಪ್ಪಿದ್ದಾರೆ.ಇನ್ನೂ ಕೆಲವು ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಪೋಲಿಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮಳೆಯಿಂದಾಗಿ ಹಾನಿಯಾಗಿರುವ ಬಾನಿ ತಹಸಿಲ್‌ನ ಪೀಡಿತ ಹಳ್ಳಿಗಳಲ್ಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಿವದೀಪ್ ಸಿಂಗ್ ಜಮ್ವಾಲ್ ಅವರ ಮೇಲ್ವಿಚಾರಣೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಕಾರಿ ಹೇಳಿದ್ದಾರೆ.
ಇದನ್ನೂ ಓದಿ:ಉತ್ತರಪ್ರದೇಶ: ಭೀಕರ ಮಳೆಗೆ ಕಟ್ಟಡ, ಸೇತುವೆ, ವಾಹನ, ಮನೆ ನೀರು ಪಾಲು
ಮನೆ ಕುಸಿದು ಸುರ್ಜನ್ ಗ್ರಾಮದಲ್ಲಿ ಇಬ್ಬರು ಸಾವನ್ನಪ್ಪಿದ್ದು ಮೂವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಅವರು ಹೇಳಿದ್ದಾರೆ. ಬನಿ ತಹಸಿಲ್‌ನ ಇತರ ಗ್ರಾಮಗಳಿಂದಲೂ ಮನೆ ಕುಸಿತದ ವರದಿಗಳು ಬಂದಿವೆ. ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.