ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ: ಎಸ್‌ಐ ಬಂಧನ

ಭಟ್ಕಳ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಹೊನ್ನಾವರ ತಾಲೂಕಿನ ಮಾಂಕಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಎಸ್‌ಐ) ಒಬ್ಬರನ್ನು ಭಟ್ಕಳ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತೆ

ಬಂಧಿತನನ್ನು ಅಭಿನಂದನ್ ಗೌಡ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆ (ಪೋಕ್ಸೋ) ಸೇರಿದಂತೆ ಅನ್ವಯಿಸುವ ವಿವಿಧ ಕಲಂಗಳು ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುರಿನಕಟ್ಟೆ ಪ್ರದೇಶದಲ್ಲಿ ನಡೆದ ಸಮುದಾಯದ ಗಲಭೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಯೋಜಿತರಾಗಿದ್ದ ವೇಳೆ ಈ ಘಟನೆ ನಡೆದಿದೆ. ಮಾಂಕಿ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ಗೌಡ ಅವರನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ಭಟ್ಕಳಕ್ಕೆ ನಿಯೋಜಿಸಲಾಗಿತ್ತು.

ಇದನ್ನೂ ಓದಿ: SIR ಶಾಕ್: 22 ಲಕ್ಷ ಮತದಾರರ ಹೆಸರು ಡಿಲೀಟ್!

ಆ ಸಂದರ್ಭದಲ್ಲಿ ಅವರು 16 ವರ್ಷದ ಅಪ್ರಾಪ್ತೆಯನ್ನು ತಮ್ಮ ಜೊತೆ ಬರಲು ಬಲವಂತಪಡಿಸಿ, ಖಾಸಗಿ ಹೋಟೆಲ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಇದೆ.

ಜುಲೈ 4, 2026ರಂದು ನೀಡಿದ ದೂರಿನಲ್ಲಿ, ಮೇ 31ರಂದು ಈ ಘಟನೆ ನಡೆದಿದೆ ಎಂದು ಬಾಲಕಿ ತಿಳಿಸಿದ್ದಾರೆ. ತನ್ನ ಅಪ್ರಾಪ್ತ ವಯಸ್ಸು ಗೊತ್ತಿದ್ದರೂ ಆರೋಪಿಯು ಮೊಬೈಲ್ ಮೂಲಕ ಪುನಃ ಪುನಃ ಸಂಪರ್ಕ ಸಾಧಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೇ 31ರಂದು ಅಭಿನಂದನ್ ಗೌಡ ಅವರು ಬಾಲಕಿಯನ್ನು ಹೊನ್ನಾವರದಲ್ಲಿರುವ ತಮ್ಮ ಸಂಬಂಧಿಯ ಮನೆಯ ಜನ್ಮದಿನ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿ, ನಂತರ ಅಲ್ಲಿಂದ ಹೋಟೆಲ್‌ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆ ದಿನವೇ ಮುರಿನಕಟ್ಟೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜಿತಗೊಂಡಿದ್ದ ಪೊಲೀಸರು ಅದೇ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡುತ್ತಿದ್ದರು ಎಂಬುದು ಗಮನಾರ್ಹ ಸಂಗತಿ.

ದೂರು ದಾಖಲಾಗುತ್ತಿದ್ದಂತೆ ಭಟ್ಕಳ ಪೊಲೀಸರು ಹೋಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಯನ್ನು ವಿಚಾರಣೆಗಾಗಿ ಕರೆಸಿ ಬಳಿಕ ಬಂಧಿಸಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ನಿವಾಸಿಯಾಗಿರುವ ಅಭಿನಂದನ್ ಗೌಡ ಅವರನ್ನು ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿತ್ತು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಆಗಿ ನೇಮಕ ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಭಟ್ಕಳ ಪಟ್ಟಣ ಪೊಲೀಸರು ಮುಂದುವರಿಸಿದ್ದಾರೆ.

ಇದನ್ನೂ ನೋಡಿ: “ಇರಾನ್ – ಯು.ಎಸ್. ನಡುವಿನ MoUನಲ್ಲಿ ಏನಿದೆ?” | ಎನ್‌ ಕೆ ವಸಂತರಾಜ, ಗುರುರಾಜ ದೇಸಾಯಿ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *