ವಿಟ್ಲ: ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕನಿಂದ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ಒಂದು ಸುತ್ತಿನ ವಿಚಾರಣೆ ನಡೆದಿದೆ. ವಿಟ್ಲ
ಈತ 10ಕ್ಕೂ ಅಧಿಕ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣ ಘಟಕದಿಂದ ತನಿಖೆ ಕೈಗೊಳ್ಳಲಾಗಿದೆ. ವಿಟ್ಲ ಪೊಲೀಸ್ ಠಾಣೆಗೂ ಹೆತ್ತವರು ದೂರು ನೀಡಿದ್ದಾರೆ.
ಇದನ್ನೂ ಓದಿ: ಸಿ.ಟಿ.ರವಿ ಅವಾಚ್ಯ ಪದ : ‘CID’ ಗೆ ವಿಡಿಯೋ ಲಭ್ಯ!
ಇದೇ ಶಿಕ್ಷಕ ಈ ಹಿಂದೆಯೂ ಕರೋಪಾಡಿ ಗ್ರಾಮದಲ್ಲಿ ಶಿಕ್ಷಕನಾಗಿದ್ದಾಗ ಠಾಣೆಗೆ ದೂರು ನೀಡಲಾಗಿತ್ತು. ಆಮೇಲೆ ಈತನನ್ನು ಬೇರೆಡೆಗೆ ವರ್ಗಾಯಿಸಿ, ವಿಷಯ ಮುಚ್ಚಿ ಹಾಕಲಾಗಿತ್ತು.
ಇದನ್ನೂ ನೋಡಿ: ಬೀದಿಬದಿ ವ್ಯಾಪಾರಿಗಳ ಐಕ್ಯತೆಯನ್ನು ಮುರಿದು ಹೋರಾಟವನ್ನು ಹತ್ತಿಕ್ಕಲು ಶಾಸಕ ವೇದವ್ಯಾಸ ಕಾಮತ್ ಕುಮ್ಮಕ್ಕು