ಹಾವೇರಿ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಮುರುಘಾ ಶ್ರೀಗಳನ್ನ ಪೊಲೀಸರು ಹಾವೇರಿ ಬಂಕಾಪುರ ಬಳಿ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದ್ದು ಚಿತ್ರದುರ್ಗಕ್ಕೆ ಕರೆದೊಯ್ಯುತ್ತಿದ್ದಾರೆ ಎನ್ನಲಾಗಿದೆ. ಅಪ್ರಾಪ್ತ ಬಾಲಕೀಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮುರುಘಾ ಶ್ರೀಗಳ ವಿರುದ್ಧ ಕೇಳಿ ಬಂದಿದ್ದು ಪೋಕ್ಸೋ ಕಾಯ್ದೆಯಡಿ ಈಗಾಗಲೇ ಪ್ರಕರಣ ದಾಖಲಾಗಿದೆ. ಮೈಸೂರು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೂರು ನೀಡಿದ್ದರು. ನಜರಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐ ಆರ್ ದಾಖಲಾಗಿತ್ತು.
ಇದನ್ನೂ ಓದಿ : ಲೈಂಗಿಕ ಕಿರುಕುಳ ಆರೋಪ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎಫ್‌ಐಆರ್
ಸಿಆರ್ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸಂತ್ರಸ್ತೆಯರು ಹೇಳಿಕೆ ದಾಖಲಿಸಿದ ಬಳಿಕ ಪೊಲೀಸರ ಮುಂದಿನ ನಡೆ ಏನಾಗಲಿದೆ ಎಂಬುದರ ಬಗ್ಗೆ ಮುರುಘಾ ಶ್ರೀ ತಡರಾತ್ರಿವರೆಗೂ ಕಾನೂನು ತಜ್ಞರ ಬಳಿ ಕಾನೂನು ಸಲಹೆ ಪಡೆದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.