ಸಹಾಯಕ ಪ್ರಾಧ್ಯಾಪಕನಿಂದ ಪದವಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

* ಬಿ.ಕಾಂ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ ಆರೋಪ
* ಮೂರು ತಿಂಗಳ ಗರ್ಭಿಣಿ ಆದ ಯುವತಿ
* ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2)(N) ಮತ್ತು 506 ಅಡಿ ದೂರು ದಾಖಲು

ಹಾವೇರಿ : ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣ ಶಿಗ್ಗಾಂವಿ ತಾಲೂಕಿಲ್ಲಿ ನಡೆದಿದೆ. ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಈ ಆರೋಪ ಕೇಳಿಬಂದಿದೆ.

ನಿಂಗಪ್ಪ ಕಲಕೋಟಿ ಎಂಬುವವರು ಬಿ . ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ . ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ . ಒಂದೂವರೆ ವರ್ಷಗಳಿಂದ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ . ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆರೋಪಿ ನಿಂಗಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ . ನಿಂಗಪ್ಪ ಎಸಗಿದ ಕೃತ್ಯದಿಂದ ಕಾಲೇಜು ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ . ಸದ್ಯ ಸಂತ್ರಸ್ತ ವಿದ್ಯಾರ್ಥಿನಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ . ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ನೊಂದ ವಿದ್ಯಾರ್ಥಿನಿ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.  ಐಪಿಸಿ 376 (2)(N) ಮತ್ತು 506 ಅಡಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *